ADVERTISEMENT

ಹೆಬ್ರಿ: ಡಯಾಲಿಸಿಸ್‌ ಕೇಂದ್ರ ನೀಡುವಂತೆ ಆರೋಗ್ಯ ಸಚಿವರಿಗೆ ಮನವಿ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2024, 13:40 IST
Last Updated 13 ಫೆಬ್ರುವರಿ 2024, 13:40 IST

ಹೆಬ್ರಿ: ಹೆಬ್ರಿ ತಾಲ್ಲೂಕು ರಚನೆಯಾಗಿ 7ವರ್ಷವಾಗುತ್ತಿದ್ದು, ಇಲ್ಲಿನ ಸರ್ಕಾರಿ ಆಸ್ಪತ್ರೆ ಸಮುದಾಯ ಆರೋಗ್ಯ ಕೇಂದ್ರವಾಗಿಯೇ ಉಳಿದಿದೆ. ಆದ್ದರಿಂದ ಸಮುದಾಯ ಆಸ್ಪತ್ರೆಯನ್ನು ತಾಲ್ಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸಿ, ಡಯಾಲಿಸಿಸ್‌ ಕೇಂದ್ರವನ್ನು ನೀಡುವಂತೆ ಆರೋಗ್ಯ ಸಚಿವ ದಿನೇಶ ಗುಂಡೂರಾವ್‌ ಅವರಿಗೆ ಕೆಪಿಸಿಸಿ ಸದಸ್ಯ ನೀರೆ ಕೃಷ್ಣ ಶೆಟ್ಟಿ ಮನವಿ ಮಾಡಿದರು.

ಮನವಿ ಸ್ವೀಕರಿಸಿದ ಸಚಿವರು ಬೇಡಿಕೆ ಈಡೇರಿಸುವ ಭರವಸೆ ನೀಡಿದರು. ಹೆಬ್ರಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಚಂದ್ರಶೇಖರ ಬಾಯರಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮಂಜುನಾಥ ಪೂಜಾರಿ, ಇಂಟಕ್‌ ಅಧ್ಯಕ್ಷ ಕಿರಣ್‌ ಹೆಗ್ಡೆ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT