ADVERTISEMENT

‘ಸ್ವ ಉದ್ಯೋಗದಲ್ಲಿ ಪ್ರಾಮಾಣಿಕತೆ ಮುಖ್ಯ’

​ಪ್ರಜಾವಾಣಿ ವಾರ್ತೆ
Published 3 ಮೇ 2024, 14:10 IST
Last Updated 3 ಮೇ 2024, 14:10 IST
ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆಯಲ್ಲಿ ಆರಂಭವಾದ ಮಹಿಳೆಯರ ಬ್ಯೂಟಿ ಪಾರ್ಲರ್ ಮ್ಯಾನೇಜ್‌ಮೆಂಟ್ ತರಬೇತಿಗೆ ಶಕೀಲಾ ಹೆಗ್ಡೆ ಚಾಲನೆ ನೀಡಿದರು
ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆಯಲ್ಲಿ ಆರಂಭವಾದ ಮಹಿಳೆಯರ ಬ್ಯೂಟಿ ಪಾರ್ಲರ್ ಮ್ಯಾನೇಜ್‌ಮೆಂಟ್ ತರಬೇತಿಗೆ ಶಕೀಲಾ ಹೆಗ್ಡೆ ಚಾಲನೆ ನೀಡಿದರು   

ಬ್ರಹ್ಮಾವರ: ರುಡ್‌ಸೆಟ್ ಸಂಸ್ಥೆಯ ತರಬೇತಿಯನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡರೆ ಭವಿಷ್ಯದಲ್ಲಿ ಯಶಸ್ವಿ ಉದ್ಯಮಿಯಾಗುವುದರಲ್ಲಿ ಸಂದೇಹವಿಲ್ಲ ಎಂದು ಬ್ರಹ್ಮಾವರ ಕೌಶಲ್ಯ ಬ್ಯೂಟಿ ಪಾರ್ಲರ್‌ನ ಮಾಲಕಿ ಶಕೀಲಾ ಹೆಗ್ಡೆ ಅಭಿಪ್ರಾಯಪಟ್ಟರು.

ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆಯಲ್ಲಿ 30 ದಿನಗಳ ಕಾಲ ನಡೆಯಲಿರುವ ಮಹಿಳೆಯರ ಬ್ಯೂಟಿ ಪಾರ್ಲರ್ ಮ್ಯಾನೇಜ್‌ಮೆಂಟ್ ತರಬೇತಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಉದ್ಯಮದಲ್ಲಿ ಪ್ರಾಮಾಣಿಕತೆ, ಮಾಡುವ ಕೆಲಸದಲ್ಲಿ ಪ್ರೀತಿ, ಗೌರವ ಇರಲಿ. ಉದ್ಯಮದಲ್ಲಿ ಹಂತ ಹಂತವಾಗಿ ಬೆಳೆಯಿರಿ ಎಂದು ಅವರು ಶುಭ ಹಾರೈಸಿದರು.

ADVERTISEMENT

ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಲಕ್ಷ್ಮೀಶ್ ಎ.ಜಿ. ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಉಪನ್ಯಾಸಕ ರವಿ ಸ್ವಾಗತಿಸಿದರು. ಶಾಂತಪ್ಪ ವಂದಿಸಿದರು. ಸಂತೋಷ ಶೆಟ್ಟಿ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.