ADVERTISEMENT

ವಿದ್ವಾಂಸ ಸಗ್ರಿ ರಾಘವೇಂದ್ರ ಉಪಾಧ್ಯಾಯ ನಿಧನ

​ಪ್ರಜಾವಾಣಿ ವಾರ್ತೆ
Published 15 ಜೂನ್ 2024, 14:32 IST
Last Updated 15 ಜೂನ್ 2024, 14:32 IST
ಸಗ್ರಿ ರಾಘವೇಂದ್ರ ಉಪಾಧ್ಯಾಯ
ಸಗ್ರಿ ರಾಘವೇಂದ್ರ ಉಪಾಧ್ಯಾಯ   

ಉಡುಪಿ: ವಿದ್ವಾಂಸ ಸಗ್ರಿ ರಾಘವೇಂದ್ರ ಉಪಾಧ್ಯಾಯ (72) ಅವರು ಶನಿವಾರ ಬೆಂಗಳೂರಿನಲ್ಲಿ ನಿಧನರಾದರು.

ಅವರಿಗೆ ಪತ್ನಿ, ಒಬ್ಬ ಪುತ್ರ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ.

ಬೆಂಗಳೂರಿನಲ್ಲಿ ಶ್ರೀಭಂಡಾರಕೇರಿ ಮಠದ ವತಿಯಿಂದ ಶುಕ್ರವಾರ ನಡೆದ ಪ್ರವಚನ ಕಾರ್ಯಕ್ರಮದಲ್ಲಿ ಪ್ರವಚನ ನೀಡುತ್ತಿದ್ದಾಗ ಅವರು ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದರು.

ADVERTISEMENT

ಉಡುಪಿಯ ಅಷ್ಟಮಠಗಳ ಆಸ್ಥಾನ ವಿದ್ವಾಂಸರೂ ಆಗಿದ್ದ ಸಗ್ರಿ ರಾಘವೇಂದ್ರ ಅವರು, ಶ್ರೀ ಮನ್ನಧ್ವ ಸಿದ್ಧಾಂತ ಸಂಸ್ಕೃತ ಮಹಾವಿದ್ಯಾಲಯದಲ್ಲಿ ಸುದೀರ್ಘ ಅವಧಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.

ಮಠಗಳಿಂದ ಪ್ರಕಟವಾಗುತ್ತಿದ್ದ ಸುಗುಣಮಾಲಾ, ಸರ್ವಮೂಲ ತತ್ತ್ವವಾದ ಮೊದಲಾದ ಅನೇಕ ಮಾಸಪತ್ರಿಕೆಗಳಲ್ಲಿ ನಿರಂತರ ಆಧ್ಯಾತ್ಮಿಕ ಚಿಂತನೆಗಳಿಗೆ ಸಂಬಂಧಿಸಿದ ಅಂಕಣಗಳನ್ನು ಬರೆಯುತ್ತಿದ್ದರು.

ಬೆಂಗಳೂರಿನಲ್ಲಿ ಅಂತ್ಯಸಂಸ್ಕಾರ ನೆರವೇರಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.