ಕಾರ್ಕಳ: ತಾಲ್ಲೂಕಿನ ಬೈಲೂರು ಉಮಿಕಲ್ ಬೆಟ್ಟದ ಪರಿಶುರಾಮ ಥೀಮ್ ಪಾರ್ಕ್‌ನಲ್ಲಿ ಪರಶುರಾಮ ಮೂರ್ತಿ ನಿರ್ಮಾಣ ಮಾಡಿರುವ ಶಿಲ್ಪಿ, ಬೆಂಗಳೂರಿನ ಕೃಷ್ ಆರ್ಟ್ ವರ್ಲ್ಡ್‌ನ ಕೃಷ್ಣ ನಾಯ್ಕ ಅವರನ್ನು ಕಾರ್ಕಳ ನಗರ ಪೊಲೀಸರು ಸೋಮವಾರ ಕಾರ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಅವರನ್ನು 7 ದಿನ ಪೊಲೀಸ್ ಕಸ್ಟಡಿಗೆ ನೀಡಿದೆ.
ಕೃಷ್ಣ ನಾಯ್ಕ ವಿರುದ್ಧ ಕೃಷ್ಣ ಶೆಟ್ಟಿ ಬಜಗೋಳಿ ಎಂಬುವರು ನೀಡಿದ್ದ ದೂರಿಗೆ ಸಂಬಂಧಿಸಿ 4ರಂದು ಕಾರ್ಕಳ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿತ್ತು. ವಾದ-ಪ್ರತಿವಾದ ಆಲಿಸಿದ ನ್ಯಾಯಾ ಧೀಶರು ಕೃಷ್ಣ ನಾಯ್ಕ ಅವರ ನಿರೀಕ್ಷಣಾ ಜಾಮೀನು ಆದೇಶವನ್ನು ನ.7ಕ್ಕೆ ಕಾಯ್ದಿರಿಸಿದ್ದರು. ನ.7ರಂದು ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತವಾಗಿತ್ತು.
ಪೊಲೀಸರು ಭಾನುವಾರ ಕೃಷ್ಣ ನಾಯ್ಕ ಅವರನ್ನು ಪುದುಚೇರಿಯ ಮಾಹೆಯಲ್ಲಿ ಬಂಧಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.