ಉಡುಪಿ: ಜಿಲ್ಲೆಯ ವಿವಿಧೆಡೆ ಕಲ್ಕೊರೆತ ಸಂಭವಿಸಿದ್ದು, ತಕ್ಷಣ ₹5 ಕೋಟಿ ಪರಿಹಾರ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.
ಜಿಲ್ಲೆಯಲ್ಲಿ ಕಡಲ್ಕೊರೆತ ಉಂಟಾಗಿರುವ ಮತ್ತು ನೆರೆಯಿಂದ ಹಾನಿ ಸಂಭವಿಸಿರುವ ಪ್ರದೇಶಗಳಿಗೆ ಭಾನುವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಆವರು ಸುದ್ದಿಗಾರರ ಜೊತೆ ಮಾತನಾಡಿದರು.
ಹಳೆ ಬಾಕಿ ಬಿಡುಗಡೆಗೂ ಪ್ರಸ್ತಾವನೆ ಸಲ್ಲಿಸಲಿದ್ದೇವೆ ಎಂದರು.
ಮಳೆ, ಪ್ರವಾಹದ ಸಂದರ್ಭದಲ್ಲಿ ಪ್ರಾಣಹಾನಿ ಸಂಭವಿಸದಂತೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ವಹಿಸಿದೆ ಎಂದು ಸಚಿವೆ ತಿಳಿಸಿದರು.
ತೀವ್ರ ಕಡಲ್ಕೊರೆತ ಉಂಟಾಗಿರುವ ಮಲ್ಪೆ ಸಮೀಪದ ಗುಜ್ಜರಬೆಟ್ಟಿಗೆ ಭೇಟಿ ನೀಡಿದ ಸಚಿವೆ ಸ್ಥಳೀಯರಿಂದ ಮಾಹಿತಿ ಪಡೆದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.