ಉಡುಪಿ: ಇಲ್ಲಿಯ ಕೃಷ್ಣಮಠದಲ್ಲಿ ಬುಧವಾರ ಶ್ರದ್ಧಾಭಕ್ತಿಯಿಂದ ಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು. ಅಷ್ಟಮಿಯ ಅಂಗವಾಗಿ ಕಡೆಗೋಲು ಕೃಷ್ಣನಿಗೆ ಬೆಣ್ಣೆ ಕೃಷ್ಣನ ಅಲಂಕಾರ ಮಾಡಲಾಗಿತ್ತು.
ಪರ್ಯಾಯ ಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಕಡೆಗೋಲು ಕೃಷ್ಣನಿಗೆ ಮಹಾಪೂಜೆ ನೆರವೇರಿಸಿದರು. ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸಿ ಕೃಷ್ಣನ ದರ್ಶನ ಪಡೆದರು. ರಥಬಿದಿಯ ಪರಿಸರದಲ್ಲಿ ಭಕ್ತ ಸಾಗರವೇ ನೆರೆದಿತ್ತು.
ಕೃಷ್ಣಮಠಕ್ಕೆ ಹಲವು ಬಗೆಯ ಹೂಗಳಿಂದ ವಿಶೇಷ ಅಲಂಕಾರ ಮಾಡಲಾಗಿತ್ತು.
ಕೃಷ್ಣಮಠದಲ್ಲಿ ಮುದ್ದು ಕೃಷ್ಣ ವೇಷ ಸ್ಪರ್ಧೆಗಳು ನಡೆದವು. ನೂರಾರು ಹುಲಿ ಕುಣಿತ ತಂಡಗಳು ಹಾಗೂ ವೇಷಧಾರಿಗಳು ಪ್ರದರ್ಶನ ನೀಡಿ ಸಾರ್ವಜನಿಕರನ್ನು ರಂಜಿಸಿದರು.
ಗುರುವಾರ ಮಧ್ಯಾಹ್ನ ವಿಟ್ಲಪಿಂಡಿ ಉತ್ಸವ ನಡೆಯಲಿದ್ದು ಕೃಷ್ಣನನ್ನು ಚಿನ್ನದ ರಥದಲ್ಲಿ ಪ್ರತಿಷ್ಠಾಪಿಸಿ ಮೆರವಣಿಗೆ ಮಾಡಲಾಗುವುದು. ಈ ಸಂದರ್ಭ ಸಾಂಪ್ರದಾಯಿಕ ಮೊಸರು ಕುಡಿಕೆ ಒಡೆಯುವ ಆಚರಣೆ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.