ADVERTISEMENT

ಎಸ್‌ಎಸ್‌ಎಲ್‌ಸಿ–2: ಶೇ 47 ಫಲಿತಾಂಶ

​ಪ್ರಜಾವಾಣಿ ವಾರ್ತೆ
Published 11 ಜುಲೈ 2024, 6:49 IST
Last Updated 11 ಜುಲೈ 2024, 6:49 IST

ಉಡುಪಿ: ಎಸ್‌ಎಸ್‌ಎಲ್‌ಸಿ–2 ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಜಿಲ್ಲೆಯಲ್ಲಿ ಶೇ47.69 ರಷ್ಟು ಫಲಿತಾಂಶ ದಾಖಲಾಗಿದೆ.

ಪರೀಕ್ಷೆಯಲ್ಲಿ ಕುಂದಾಪುರ ವಲಯ ಉತ್ತಮ ಸಾಧನೆ ಮಾಡಿದ್ದು, ಶೇ 59.56 ರಷ್ಟು ಸಾಧನೆ ಆಗಿದೆ. ಈ ವಲಯದಲ್ಲಿ 183 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 109 ಮಂದಿ ತೇರ್ಗಡೆಯಾಗಿದ್ದಾರೆ. ಕಾರ್ಕಳ ವಲಯದಲ್ಲಿ ಶೇ 51.37 ರಷ್ಟು ಫಲಿತಾಂಶ ಬಂದಿದ್ದು, ಪರೀಕ್ಷೆ ಬರೆದ 146 ವಿದ್ಯಾರ್ಥಿಗಳ ಪೈಕಿ 75 ಮಂದಿ ತೇರ್ಗಡೆಯಾಗಿದ್ದಾರೆ.

ಬ್ರಹ್ಮಾವರ ವಲಯದಲ್ಲಿ ಶೇ42.52 ರಷ್ಟು ಫಲಿತಾಂಶ ದಾಖಲಾಗಿದ್ದು, 214 ವಿದ್ಯಾರ್ಥಿಗಳ ಪೈಕಿ 91 ಮಂದಿ ಉತ್ತೀರ್ಣರಾಗಿದ್ದಾರೆ. ಉಡುಪಿ ವಲಯದಲ್ಲಿ 313 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 130 ಮಂದಿ ತೇರ್ಗಡೆಯಾಗಿದ್ದಾರೆ. ಇಲ್ಲಿ ಶೇ 41.53 ರಷ್ಟು ಫಲಿತಾಂಶ ದಾಖಲಾಗಿದೆ. ಬೈಂದೂರು ವಲಯದಲ್ಲಿ ಶೇ 50.43ರಷ್ಟು ಫಲಿತಾಂಶ ದಾಖಲಾಗಿದ್ದು, ಪರೀಕ್ಷೆ ಬರೆದ 117 ವಿದ್ಯಾರ್ಥಿಗಳ ಪೈಕಿ 59 ಮಂದಿ ಉತ್ತೀರ್ಣರಾಗಿದ್ದಾರೆ.

ADVERTISEMENT

ಎಸ್‌ಎಸ್‌ಎಲ್‌ಸಿ–2 ಪರೀಕ್ಷೆಯಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಈ ಪರೀಕ್ಷೆ ವಿದ್ಯಾರ್ಥಿಗಳಿಗೆ ಒಳ್ಳೆಯ ಅವಕಾಶ. ಎಸ್‌ಎಸ್‌ಎಲ್‌ಸಿ–3 ಪರೀಕ್ಷೆ ಕೂಡ ಶೀಘ್ರ ನಡೆಯಲಿದೆ. ಜಿಲ್ಲೆಯಲ್ಲಿ 648 ವಿದ್ಯಾರ್ಥಿಗಳು ಮತ್ತು 325 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದು, ಇದರಲ್ಲಿ 260 ವಿದ್ಯಾರ್ಥಿಗಳು ಮತ್ತು 204 ವಿದ್ಯಾರ್ಥಿನಿಯರು ತೇರ್ಗಡೆಯಾಗಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಗಣಪತಿ ಕೆ. ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.