ADVERTISEMENT

ಉಡುಪಿ: ಎಸ್ಸೆಸ್ಸೆಲ್ಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2021, 16:14 IST
Last Updated 13 ಆಗಸ್ಟ್ 2021, 16:14 IST
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625 ಪೂರ್ಣ ಅಂಕಗಳನ್ನು ಪಡೆದ ಜಿಲ್ಲೆಯ ಸಾಧಕ ವಿದ್ಯಾರ್ಥಿಗಳನ್ನು ಜಿಲ್ಲಾಧಿಕಾರಿ ಜಿ.ಜಗದೀಶ್ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಡಾ.ವೈ.ನವೀನ್ ಭಟ್ ಸನ್ಮಾನಿಸಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625 ಪೂರ್ಣ ಅಂಕಗಳನ್ನು ಪಡೆದ ಜಿಲ್ಲೆಯ ಸಾಧಕ ವಿದ್ಯಾರ್ಥಿಗಳನ್ನು ಜಿಲ್ಲಾಧಿಕಾರಿ ಜಿ.ಜಗದೀಶ್ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಡಾ.ವೈ.ನವೀನ್ ಭಟ್ ಸನ್ಮಾನಿಸಿದರು.   

ಉಡುಪಿ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625 ಪೂರ್ಣ ಅಂಕಗಳನ್ನು ಪಡೆದ ಜಿಲ್ಲೆಯ ಸಾಧಕ ವಿದ್ಯಾರ್ಥಿಗಳನ್ನು ಜಿಲ್ಲಾಧಿಕಾರಿ ಜಿ.ಜಗದೀಶ್ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಡಾ.ವೈ.ನವೀನ್ ಭಟ್ ಸನ್ಮಾನಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದ ಜಿಲ್ಲಾಧಿಕಾರಿ ಜಿ.ಜಗದೀಶ್‌ ‘ಪೆರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದು ಸಾಧನೆ ಮಾಡಿರುವ ವಿದ್ಯಾರ್ಥಿಗಳು ಮುಂದೆಯೂ ಹೆಚ್ಚು ಅಂಕಗಳನ್ನು ಪಡೆದು ಜಿಲ್ಲೆಗೆ ಕೀರ್ತಿ ತರಬೇಕು ಎಂದು ಹಾರೈಸಿದರು.

ವಿದ್ಯೆ ಕಲಿಸಿದ ಗುರುಗಳಿಗೆ ಹಾಗೂ ತಂದೆ ತಾಯಿಗಳನ್ನು ಗೌರವಿಸಬೇಕು. ಉತ್ತಮ ಭವಿಷ್ಯ ರೂಪಿಸಿದ ಪೋಷಕರನ್ನು ಮುಪ್ಪಿನಲ್ಲಿ ಜೋಪಾನವಾಗಿ ಕಾಪಾಡಿಕೊಳ್ಳಬೇಕು. ಸಂಸ್ಕಾರಯುತ ಬದುಕನ್ನು ರೂಪಿಸಿಕೊಳ್ಳಬೇಕು ಎಂದರು.

ADVERTISEMENT

ಜಿಲ್ಲಾ ಪಂಚಾಯಿತಿ ಸಿಇಒ ಮಾತನಾಡಿ, ಪೂರ್ಣ ಅಂಕ ಗಳಿಸುವ ಮೂಲಕ ವಿದ್ಯಾರ್ಥಿಗಳು ಶ್ರೇಷ್ಠ ಸಾಧನೆ ಮಾಡಿದ್ದಾರೆ. ಮುಂದಿನ ಶೈಕ್ಷಣಿಕ ಭವಿಷ್ಯ ರೂಪಿಸಿಕೊಳ್ಳಲು ಗುರು ಹಿರಿಯರ ಮಾರ್ಗದರ್ಶನ ಪಡೆಯಿರಿ. ಗುರಿಯೊಂದಿಗೆ ಅಧ್ಯಯನ ಮಾಡಿದರೆ ಯಶಸ್ಸು ಖಚಿತವಾಗಿ ಸಿಗಲಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಿ. ನೆಲದ ಸಂಸ್ಕಾರಕ್ಕೆ ಗೌರವ ಕೊಡುವ ಗುಣ ಬೆಳೆಸಿಕೊಳ್ಳಿ ಎಂದು ಕಿವಿಮಾತು ಹೇಳಿದರು.

ಡಿಡಿಪಿಐ ಎನ್.ಎಚ್.ನಾಗೂರ ಅವರು ಕಾರ್ಯಕ್ರಮದ ಔಚಿತ್ಯವನ್ನು ವಿವರಿಸಿ ಸ್ವಾಗತಿಸಿದರು.ಕಾರ್ಯಕ್ರಮದಲ್ಲಿ ಡಿಡಿಪಿಐ ಕಚೇರಿಯ ಶಿಕ್ಷಣಾಧಿಕಾರಿ ಸಿ.ಜಾಹ್ನವಿ, ಡಿವೈಪಿಸಿ ಪ್ರಭಾಕರ ಮಿತ್ಯಂತ, ಉಡುಪಿ ಬಿಇಒ ನಾಗೇಂದ್ರಪ್ಪ ಕುಂದಾಪುರ ಬಿಇಒ ಎಸ್.ಕೆ.ಪದ್ಮನಾಭ, ಅಧಿಕಾರಿಗಳಾದ ನಾಗರಾಜ್, ರಾಘವಶೆಟ್ಟಿ, ರಶ್ಮಿ ರಾಘವೆಂದ್ರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.