ADVERTISEMENT

ಕೃಷಿ ಕಾಲೇಜಿನಲ್ಲಿ ಡಿಪ್ಲೋಮಾ ಕೋರ್ಸ್ ಪುನರಾರಂಭಕ್ಕೆ ಅಸ್ತು:ಜಯಪ್ರಕಾಶ್‌ ಹೆಗ್ಡೆ

​ಪ್ರಜಾವಾಣಿ ವಾರ್ತೆ
Published 15 ಜುಲೈ 2024, 14:09 IST
Last Updated 15 ಜುಲೈ 2024, 14:09 IST
ಕೆ.ಜಯಪ್ರಕಾಶ್ ಹೆಗ್ಡೆ.
ಕೆ.ಜಯಪ್ರಕಾಶ್ ಹೆಗ್ಡೆ.   

ಕುಂದಾಪುರ: ಬ್ರಹ್ಮಾವರ ಕೃಷಿ ಸಂಶೋಧನ ಕೇಂದ್ರದಲ್ಲಿ ಎರಡು ವರ್ಷಗಳ ಕೃಷಿ ಡಿಪ್ಲೋಮಾ ಕೋರ್ಸ್ ಆರಂಭಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಎಂದು ಮಾಜಿ ಸಂಸದ ಕೆ.ಜಯಪ್ರಕಾಶ್‌ ಹೆಗ್ಡೆ ತಿಳಿಸಿದ್ದಾರೆ.

ರಾಜ್ಯ ಕೃಷಿ ಇಲಾಖೆಯ ಅಧೀನ ಕಾರ್ಯದರ್ಶಿ ಇಂದ್ರ ಎಂ ಅವರು ಹೊರಡಿಸಿರುವ ಆದೇಶದಲ್ಲಿ, ಇಲಾಖೆಯ 33ನೇ ಸಮನ್ವಯ ಸಮಿತಿ ಹಾಗೂ 7ನೇ ಪರಿಣಿತ ಸಮಿತಿ ಸಭೆಯ ತೀರ್ಮಾನದಂತೆ ಲಭ್ಯವಿರುವ ಕಟ್ಟಡ, ಮೂಲಸೌಕರ್ಯ ಹಾಗೂ ಬೋಧನಾ ಸಿಬ್ಬಂದಿ ಬಳಸಿಕೊಂಡು, ಸರ್ಕಾರಕ್ಕೆ ಹೆಚ್ಚುವರಿ ಅನುದಾನಕ್ಕೆ ಪ್ರಾಸ್ತಾಪನೆ ಸಲ್ಲಿಸದಂತೆ ಷರತ್ತು ವಿಧಿಸಿ 2024-25ನೇ ಸಾಲಿನಿಂದಲೇ ಕೋರ್ಸ್ ಆರಂಭಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಬ್ರಹ್ಮಾವರದ ಕೃಷಿ ಕೇಂದ್ರದಲ್ಲಿ ಕೃಷಿ ಅಥವಾ ತೋಟಗಾರಿಕಾ ಪದವಿ ಕಾಲೇಜು ಹಾಗೂ ಡಿಪ್ಲೋಮಾ ಕೋರ್ಸ್ ಆರಂಭಸುವಂತೆ ಜಿಲ್ಲೆಯಾದ್ಯಂತ ಆಗ್ರಹಪೂರ್ವಕ ಬೇಡಿಕೆ ಬಂದ ಹಿನ್ನೆಲೆಯಲ್ಲಿ, ಬ್ರಹ್ಮಾವರ ಸಮೀಪದ ಚೇರ್ಕಾಡಿಯಲ್ಲಿ ನಡೆದಿದ್ದ ಕೃಷಿ ಮೇಳಕ್ಕೆ ರಾಜ್ಯ ಕೃಷಿ ಸಚಿವರಾದ ಚಲುವರಾಯ ಸ್ವಾಮಿ ಅವರನ್ನು ಆಮಂತ್ರಿಸಲಾಗಿತ್ತು. ಈ ಸಂದರ್ಭದಲ್ಲಿ ಕೃಷಿ ಕೇಂದ್ರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಬೇಡಿಕೆಯ ಕುರಿತು ಅವರಿಗೆ ಮನವರಿಕೆ ಮಾಡಿಕೊಡಲಾಗಿತ್ತು. ಅಂದೇ ಮನವಿಗೆ ಸ್ವಂದಿಸಿದ್ದ ಸಚಿವರು, ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ನಿರ್ಧಾರ ಕೈಗೊಳ್ಳುವ ಭರವಸೆ ವ್ಯಕ್ತಪಡಿಸಿದ್ದರು.

ADVERTISEMENT

ಜಿಲ್ಲೆಯ ಜನತೆಯ ಬೇಡಿಕೆಗೆ ಸ್ಪಂದಿಸಿ ಕೃಷಿ ಡಿಪ್ಲೋಮಾ ಕೋರ್ಸ್ ಆರಂಭಿಸಲು ಆದೇಶ ಹೊರಡಿಸಿರುವ ಮುಖ್ಯಮಂತ್ರಿ ಎಸ್‌.ಸಿದ್ದರಾಮಯ್ಯ ಹಾಗೂ ಕೃಷಿ ಸಚಿವ ಚಲುವರಾಯ ಸ್ವಾಮಿ ಅವರಿಗೆ ಕೃತಜ್ಞತೆ ಸಲ್ಲಿಸಿರುವ ಕೆ.ಜಯಪ್ರಕಾಶ್ ಹೆಗ್ಡೆ ಅವರು, ಬ್ರಹ್ಮಾವರದಲ್ಲಿ ಕೃಷಿ ಅಥವಾ ತೋಟಗಾರಿಕಾ ಪದವಿ ಕಾಲೇಜು ಸ್ವಾಪನೆಯವರೆಗೂ ಪ್ರಯತ್ನ ಮುಂದುವರೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲೆಯ ರೈತರ ಹಾಗೂ ವಿದ್ಯಾರ್ಥಿಗಳ ಬಹು ಬೇಡಿಕೆಗೆ ಸ್ಪಂದಿಸಿ ಬ್ರಹ್ಮಾವರದಲ್ಲಿ ಕೃಷಿ ಡಿಪ್ಲೋಮಾ ಕೋರ್ಸ್ ಆರಂಭಿಸಲು ಸರ್ಕಾರ ಆದೇಶ ಹೊರಡಿಸಿರುವುದು ಸಂತೋಷ ತಂದಿದೆ. ಜನರ ಹಕ್ಕೋತ್ತಾಯವನ್ನು ಸರ್ಕಾರಕ್ಕೆ ಮುಟ್ಟಿಸುವಲ್ಲಿ ಯಶಸ್ವಿಯಾದ ಕೆ.ಜಯಪ್ರಕಾಶ್ ಹೆಗ್ಡೆ ಅವರಿಗೂ ಅಭಿನಂದನೆಗಳು.
ಕೆ.ವಿಕಾಸ್ ಹೆಗ್ಡೆ. ಉಪಾಧ್ಯಕ್ಷರು ವ್ಯವಸಾಯ ಸಹಕಾರಿ ಬ್ಯಾಂಕ್ ಬಸ್ರೂರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.