ಕಾರ್ಕಳ: ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗದಂತೆ ಉತ್ತಮ ಸಾರಿಗೆ ಸೇವೆ ನೀಡಲು ಬದ್ಧವಾಗಿದ್ದೇವೆ ಎಂದು ಕೆನರಾ ಬಸ್ ಮಾಲೀಕರ ಸಂಘದ ಉಪಾಧ್ಯಕ್ಷ ಜೀವಂಧರ್ ಅಧಿಕಾರಿ ತಿಳಿಸಿದರು.
ಇಲ್ಲಿನ ಅನಂತ ಶಯನದ ರೋಟರಿ ಬಾಲಭವನದಲ್ಲಿ ಶುಕ್ರವಾರ ಕರೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ‘ನಿಟ್ಟೆ ಕಾಲೇಜಿನ ವಿದ್ಯಾರ್ಥಿ ಬಸ್‌ನಿಂದ ಬಿದ್ದು ಮೃತಪಟ್ಟಿದ್ದಾರೆ. ಇಂತಹ ದುರ್ಘಟನೆ ವಿಷಾದನೀಯವಾಗಿದ್ದು, ಮೃತ ವಿದ್ಯಾರ್ಥಿಯ ಕುಟುಂಬಸ್ಥರ ನೋವಿನಲ್ಲಿ ನಾವೂ ಭಾಗಿಗಳು. ಮುಂದೆ ಇಂತಹ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗುವುದು’ ಎಂದರು.
ಕಾರ್ಕಳ– ಪಡುಬಿದ್ರಿ ಮಾರ್ಗದ ಬಹುತೇಕ ಬಸ್‌ಗಳಲ್ಲಿ ಸಿಸಿ ಟಿವಿ ಕ್ಯಾಮೆರಾ ಹಾಗೂ ಬಾಗಿಲುಗಳಿಲ್ಲದಿರುವುದೂ ದುರ್ಘಟನೆಗೆ ಕಾರಣ. ಮೃತ ವಿದ್ಯಾರ್ಥಿಯ ಕುಟುಂಬದವರಿಗೆ ಮಾನವೀಯ ನೆಲೆಯಲ್ಲಿ ಸಹಾಯ ಮಾಡಲು ಸಂಘದ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಬಸ್ ಮಾಲೀಕ ಹರೀಶ್, ಗೋಪಿನಾಥ ಭಟ್, ಸತ್ಯರಂಜನ್ ಶೆಟ್ಟಿ, ಅತುಲ್ ಅಡ್ಯಂತಾಯ, ಅಬ್ಬಾಸ್ ಅಲಿ, ಬಸ್ ಏಜೆಂಟರ ಬಳಗದ ಇಕ್ಬಾಲ್ ಅಹಮ್ಮದ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.