ADVERTISEMENT

ಕಬ್ಬಿನಾಲೆ: ಮಳೆಹಾನಿ ಸ್ಥಳಕ್ಕೆ ಡಿಸಿ ಭೇಟಿ, ಪರಿಶೀಲನೆ  

​ಪ್ರಜಾವಾಣಿ ವಾರ್ತೆ
Published 6 ಜುಲೈ 2024, 14:02 IST
Last Updated 6 ಜುಲೈ 2024, 14:02 IST
ಹೆಬ್ರಿಯ ಕಬ್ಬಿನಾಲೆ ಗ್ರಾಮದ ಕೇಸರಿಬೈಲು ಎಂಬಲ್ಲಿ ಸಂಜೀವ ಶೆಟ್ಟಿ ಮತ್ತು ಲಕ್ಷ್ಮಿ ಶೆಟ್ಟಿ ಅವರ ಮನೆ ತೋಟಕ್ಕೆ ಹಾನಿಯಾಗಿರುವ ಸ್ಥಳಕ್ಕೆ ಶುಕ್ರವಾರ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಭೇಟಿ ನೀಡಿ ಪರಿಶೀಲ ನಡೆಸಿದರು.
ಹೆಬ್ರಿಯ ಕಬ್ಬಿನಾಲೆ ಗ್ರಾಮದ ಕೇಸರಿಬೈಲು ಎಂಬಲ್ಲಿ ಸಂಜೀವ ಶೆಟ್ಟಿ ಮತ್ತು ಲಕ್ಷ್ಮಿ ಶೆಟ್ಟಿ ಅವರ ಮನೆ ತೋಟಕ್ಕೆ ಹಾನಿಯಾಗಿರುವ ಸ್ಥಳಕ್ಕೆ ಶುಕ್ರವಾರ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಭೇಟಿ ನೀಡಿ ಪರಿಶೀಲ ನಡೆಸಿದರು.   

ಹೆಬ್ರಿ: ಈಚೆಗೆ ಸುರಿದ ಭಾರಿ ಮಳೆ, ಗಾಳಿಗೆ ಹಾನಿಯಾಗಿರುವ, ಇಲ್ಲಿನ ಕಬ್ಬಿನಾಲೆ ಗ್ರಾಮದ ಕೇಸರಿಬೈಲುವಿನ ಸಂಜೀವ ಶೆಟ್ಟಿ, ಲಕ್ಷ್ಮಿ ಶೆಟ್ಟಿ ಅವರ ಮನೆ, ತೋಟಕ್ಕೆ ಶುಕ್ರವಾರ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಂತ್ರಸ್ತರಿಗೆ, ಹಾನಿಯಾಗಿರುವ ಬಗ್ಗೆ ಕಂದಾಯ ಇಲಾಖೆ, ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಗರಿಷ್ಠ ಪರಿಹಾರ ನೀಡಲು ಸೂಚಿಸಿದ್ದೇನೆ ಎಂದು ಅವರು ತಿಳಿಸಿದರು.

ಕುಂದಾಪುರ ಉಪ ವಿಭಾಗಾಧಿಕಾರಿ ರಶ್ಮಿ, ತಹಶೀಲ್ದಾರ್ ಎಸ್.ಎ. ಪ್ರಸಾದ್, ಕಂದಾಯ ನಿರೀಕ್ಷಕ ಹಿತೇಶ್ ಯು.ಬಿ, ಗ್ರಾಮ ಆಡಳಿತ ಅಧಿಕಾರಿ ನವೀನ್ ಕುಮಾರ್ ಕುಕ್ಕುಜೆ ಇದ್ದರು.

ADVERTISEMENT

ಹೆಬ್ರಿ: ಮುಂದುವರಿದ ಮಳೆ

ಹೆಬ್ರಿ: ತಾಲ್ಲೂಕಿನಾದ್ಯಂತ ಶನಿವಾರವೂ ಭಾರಿ ಮಳೆಯಾಗಿದೆ. ಹಲವೆಡೆ ಗದ್ದೆ, ಅಡಿಕೆ ತೋಟ, ಕೃಷಿ ಕ್ಷೇತ್ರಗಳಿಗೆ ನೀರು ನುಗ್ಗಿ ಜಲಾವೃತಗೊಂಡಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.