ADVERTISEMENT

ಉಡುಪಿ: ಧಾರಾಕಾರ ಮಳೆಗೆ ತಗ್ಗು ಪ್ರದೇಶಗಳು ಜಲಾವೃತ

​ಪ್ರಜಾವಾಣಿ ವಾರ್ತೆ
Published 8 ಜುಲೈ 2024, 4:40 IST
Last Updated 8 ಜುಲೈ 2024, 4:40 IST
<div class="paragraphs"><p>ಮಳೆಗೆ ವಸತಿ ಪ್ರದೇಶ ಜಲಾವೃತವಾಗಿರುವುದು</p></div>

ಮಳೆಗೆ ವಸತಿ ಪ್ರದೇಶ ಜಲಾವೃತವಾಗಿರುವುದು

   

– ಪ್ರಜಾವಾಣಿ ಚಿತ್ರ

ಉಡುಪಿ: ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಮುಂದುವರಿದಿದ್ದು, ಭಾನುವಾರ ರಾತ್ರಿ ಹಾಗೂ ಸೋಮವಾರ ಬೆಳಿಗ್ಗೆ ಸುರಿದ ಬಿರುಸಿನ ಮಳೆಗೆ ನಗರ ಹಾಗೂ ಸುತ್ತಮುತ್ತಲಿನ ಕೆಲವೆಡೆ ತಗ್ಗು ಪ್ರದೇಶಗಳು ಜಲಾವೃತವಾಗಿವೆ.

ADVERTISEMENT

ಉಡುಪಿ ನಗರದ ಗುಂಡಿಬೈಲು, ಪಾಡಿಗಾರು, ಕರಂಬಳ್ಳಿ ಪ್ರದೇಶದಲ್ಲಿ ಭಾರಿ ಮಳೆಗೆ ರಸ್ತೆಗಳಲ್ಲಿ ಮಳೆ ನೀರು ಸಂಗ್ರಹ ಗೊಂಡು ವಾಹನ ಸವಾರರು ಪರದಾಡಿದರು.

ಸೋಮವಾರ ಬೆಳಿಗ್ಗೆ ಸುರಿದ ಭಾರಿ ಮಳೆಯಿಂದಾಗಿ ಕೆಲಸಕ್ಕೆ ತೆರಳುವವರು, ಶಾಲೆ, ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ತೊಂದರೆಯಾಯಿತು.

ಧಾರಾಕಾರ ಮಳೆ ಮುಂದುವರಿದಿರುವುದರಿಂದ ಕೆಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗುವ ಸಾಧ್ಯತೆ ಇದೆ ಎಂದು ಜನರು ಆತಂಕ ವ್ಯಕ್ತಪಡಿಸಿದ್ದಾರೆ.

ಗುಂಡಿಬೈಲಿನ ಕೆನರಾ ಬ್ಯಾಂಕ್ ಬಳಿ ರಸ್ತೆಯಲ್ಲಿ ಮಳೆ ನೀರು ಸಂಗ್ರಹಗೊಂಡು ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಯಿತು. ಕೆಲವು ಅಂಗಡಿಗಳಿಗೂ ಮಳೆ ನೀರು ನುಗ್ಗಿದೆ.

ಕರಂಬಲ್ಲಿಯ ವೆಂಕಟರಮಣ ಲೇಔಟ್ ನಲ್ಲಿ ಹಲವು ಮನೆಗಳಿಗೆ ನೆರೆ ನೀರು ನುಗ್ಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.