ಉಡುಪಿ: ಪಕ್ಷದ ಸಂಘಟನಾತ್ಮಕ ಕಾರ್ಯ ಚಟುವಟಿಕೆಗಳಲ್ಲಿ ಉಡುಪಿ ಜಿಲ್ಲೆ ರಾಜ್ಯದಲ್ಲೇ ಮುಂಚೂಣಿಯಲ್ಲಿರುವ ಜಿಲ್ಲೆ. ಸದಸ್ಯತ್ವ ಅಭಿಯಾನದಲ್ಲಿ ಪಕ್ಷದ ರಾಷ್ಟ್ರ, ರಾಜ್ಯ ಮುಖಂಡರು ನಿಗದಿಪಡಿಸಿರುವ ಗುರಿ ಮುಟ್ಟುವ ತನಕ ವಿರಮಿಸದಿರಿ ಎಂದು ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ ಕರೆ ನೀಡಿದರು.
ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಸದಸ್ಯತ್ವ ಅಭಿಯಾನದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ಅವರಿಂದ ಚಾಲನೆಗೊಂಡಿರುವ ಬಿಜೆಪಿ ಸದಸ್ಯತ್ವ ಅಭಿಯಾನ ದೇಶದಾದ್ಯಂತ ವೇಗ ಪಡೆದಿದೆ. ಪಕ್ಷದ ಕಾರ್ಯಕರ್ತರು ಪ್ರತಿ ದಿನ 2 ತಾಸು ಸಮಯ ನೀಡಿ ಯೋಜನಾ ಬದ್ಧವಾಗಿ ಬೂತ್ ವ್ಯಾಪ್ತಿಯ ಮನೆ ಮನೆ ಭೇಟಿ ನೀಡಿ, ಪ್ರಧಾನಿಯ ಅಭಿಮಾನಿಗಳನ್ನೂ ವಿಶ್ವಾಸಕ್ಕೆ ತೆಗೆದುಕೊಂಡಾಗ ಗುರಿ ತಲುಪಲು ಸಾಧ್ಯ ಎಂದರು.
ಬಿಜೆಪಿ ಉಡುಪಿ ಜಿಲ್ಲಾ ಘಟಕ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರು ಖೂಬಾ ಅವರನ್ನು ಸನ್ಮಾನಿಸಿದರು.
ಮಂಡಲಾಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಪ್ರಿಯದರ್ಶಿನಿ ದೇವಾಡಿಗ, ಅನಿತಾ ಆರ್.ಕೆ., ಸುಧೀರ್ ಕೆ.ಎಸ್.ಅವರನ್ನು ಭಗವಂತ ಖೂಬಾ ಅವರು ಗೌರವಿಸಿದರು.
ಅಭಿಯಾನದ ಜಿಲ್ಲಾ ಸಂಚಾಲಕ ಮಟ್ಟಾರ್ ರತ್ನಾಕರ ಹೆಗ್ದೆ ಮತ್ತು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮಾತನಾಡಿದರು.
ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ದೆ, ಜಿಲ್ಲಾ ಘಟಕದ ಉಪಾಧ್ಯಕ್ಷರಾದ ಪೆರಣಂಕಿಲ ಶ್ರೀಶ ನಾಯಕ್, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಿರಣ್ ಕುಮಾರ್ ಬೈಲೂರು ಉಪಸ್ಥಿತರಿದ್ದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ಕಾರ್ಯಕ್ರಮ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.