ADVERTISEMENT

ವಕ್ಫ್‌ ಕಾನೂನಿಗೆ ತಿದ್ದುಪಡಿ ಅಗತ್ಯ: ಶಾಸಕ ಸುನಿಲ್‌ ಕುಮಾರ್‌

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2024, 4:37 IST
Last Updated 22 ನವೆಂಬರ್ 2024, 4:37 IST
ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಗುರುವಾರ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಶಾಸಕ ಸುನಿಲ್‌ ಕುಮಾರ್‌ ಮಾತನಾಡಿದರು
ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಗುರುವಾರ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಶಾಸಕ ಸುನಿಲ್‌ ಕುಮಾರ್‌ ಮಾತನಾಡಿದರು   

ಉಡುಪಿ: ನಮ್ಮ ದೇಶದಲ್ಲಿ ಮಿಲಿಟರಿ ಮತ್ತು ರೈಲ್ವೆಯನ್ನು ಹೊರತುಪಡಿಸಿದರೆ ಅತಿ ಹೆಚ್ಚು ಭೂಮಿ ಇರುವುದು ವಕ್ಫ್‌ ಮಂಡಳಿಗೆ. ವಕ್ಫ್‌ ಕಾನೂನಿಗೆ ತಿದ್ದುಪಡಿ ಮಾಡುವ ಅಗತ್ಯ ಇದೆ ಎಂದು ಕಾರ್ಕಳ ಶಾಸಕ ಸುನಿಲ್‌ಕುಮಾರ್‌ ಪ್ರತಿಪಾದಿಸಿದರು.

ವಕ್ಫ್ ಮಂಡಳಿ ವಿರುದ್ಧದ ‘ನಮ್ಮ ಭೂಮಿ ನಮ್ಮ ಹಕ್ಕು’ ಅಭಿಯಾನದಡಿ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಬಿಜೆಪಿ ಗುರುವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಇಡೀ ದೇಶದಲ್ಲಿ ಲಕ್ಷಾಂತರ ಎಕರೆ ಭೂಮಿಯನ್ನು ವಕ್ಫ್‌ ಮಂಡಳಿಗೆ ನೀಡುವ ಪ್ರಯತ್ನ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ನಡೆದಿದೆ ಎಂದು ಆರೋಪಿಸಿದರು.

ADVERTISEMENT

ವಕ್ಫ್‌ ಮಂಡಳಿಯ ಅದಾಲತ್‌ ಮಾಡಲು ಸಿದ್ದರಾಮಯ್ಯ ಅವರು ಆದೇಶ ನೀಡಿದ್ದರು. ಅದಕ್ಕಾಗಿ ಅದಾಲತ್‌ ಮಾಡಲಾಗಿತ್ತು ಎಂದರು.

ಆಂದೋಲನಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಚಾಲನೆ ನೀಡಿದರು. ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಪ್ರಮುಖರಾದ ಶಂಕರ ಅಂಕದಕಟ್ಟೆ, ಬೈಕಾಡಿ ಸುಪ್ರಸಾದ್ ಶೆಟ್ಟಿ, ರಾಘವೇಂದ್ರ ಉಪ್ಪೂರು ಮಾತನಾಡಿದರು.

ಬಿಜೆಪಿ ಉಡುಪಿ ಜಿಲ್ಲಾ ಘಟಕ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ನೇತೃತ್ವದ ಪದಾಧಿಕಾರಿಗಳ ತಂಡದಿಂದ ಹಗರಣಗಳನ್ನು ಅಣಕಿಸುವ ಸಾಮೂಹಿಕ ಗೀತೆ ಗಾಯನ ನಡೆಯಿತು. ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ್ ನಾಯಕ್ ಮತ್ತು ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ ತಂಡದಿಂದ ಭಜನಾ ಕಾರ್ಯಕ್ರಮ ನಡೆಯಿತು.

ರೇಷ್ಮಾ ಉದಯ ಶೆಟ್ಟಿ ನಿರೂಪಿಸಿದರು. ಜಿಲ್ಲಾ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ವಂದಿಸಿದರು.

ಲಕ್ಷಾಂತರ ಎಕರೆ ಭೂಮಿ ವಕ್ಫ್‌ ಮಂಡಳಿಗೆ ನೀಡುವ ಪ್ರಯತ್ನ ‘ನಮ್ಮ ಭೂಮಿ ನಮ್ಮ ಹಕ್ಕು’ ಅಭಿಯಾನ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.