ADVERTISEMENT

ಉಡುಪಿ | ವಕ್ಫ್ ಮಂಡಳಿ ವಿರುದ್ಧ ಪ್ರತಿಭಟನೆ: ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2024, 8:06 IST
Last Updated 6 ನವೆಂಬರ್ 2024, 8:06 IST
   

ಉಡುಪಿ: ರಾಜ್ಯದ ವಿವಿಧೆಡೆ ಪಹಣಿ ಪತ್ರಗಳಲ್ಲಿ ವಕ್ಫ್ ಮಂಡಳಿ ಆಸ್ತಿ ಎಂದು ನಮೂದಿಸಿ ರೈತರು ಮತ್ತು ಮಠ, ಮಂದಿರಗಳ ಆಸ್ತಿಯನ್ನು ಕಬಳಿಸಲು ಕಾಂಗ್ರೆಸ್ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಜಿಲ್ಲಾ ಘಟಕದ ನೇತೃತ್ವದಲ್ಲಿ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಗೆ ಬುಧವಾರ ಮುತ್ತಿಗೆ ಹಾಕಲಾಯಿತು.

ಶಾಸಕ ಯಶ್ ಪಾಲ್ ಸುವರ್ಣ ಮಾತನಾಡಿ, ಸರ್ಕಾರವು ಹಿಂದೂಗಳ ಜೀವನದ ಜೊತೆಗೆ ಚೆಲ್ಲಾಟವಾಡುತ್ತಿದೆ ಮತ್ತು ಲ್ಯಾಂಡ್ ಜಿಹಾದ್‌ಗೆ ಬೆಂಬಲ ನೀಡುತ್ತಿದೆ ಎಂದು ಆರೋಪಿಸಿದರು.

ಈ ಸಮಸ್ಯೆ ಪರಿಹಾರವಾಗುವವರೆಗೂ ಹೋರಾಟ ಮುಂದುವರಿಸುವುದಾಗಿಯೂ ಎಚ್ಚರಿಕೆ ನೀಡಿದರು.

ADVERTISEMENT

ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ವೇಳೆ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ನೂಕುನುಗ್ಗಲು ಉಂಟಾಯಿತು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ನಗರಸಭೆಯ ಅಧ್ಯಕ್ಷ ಪ್ರಭಾಕರ ಪೂಜಾರಿ, ರೇಷ್ಮಾ ಉದಯ್ ಶೆಟ್ಟಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.