ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೂರ್ಣಪ್ರಜ್ಞ ಮ್ಯಾನೇಜ್‌ಮೆಂಟ್ ಸಂಶೋಧನ ಹಾಗೂ ಅಭಿವೃದ್ಧಿ ಕೇಂದ್ರ, ಪೂರ್ಣಪ್ರಜ್ಞ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್, ಕರ್ನಾಟಕ ಬ್ಯಾಂಕ್ ಮಂಗಳೂರು ಹಾಗೂ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಸ್ತ್ರೀಶಕ್ತಿ ಗುಂಪುಗಳ ಸದಸ್ಯರಿಗೆ ಎರಡು ದಿನಗಳ ತರಬೇತಿ ಶಿಬಿರದ ಉದ್ಘಾಟನೆ ಮಂಗಳವಾರ ನಗರದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಿತು.
ಹಿರಿಯ ಸಿವಿಲ್ ನ್ಯಾಯಾಧೀಶೆ ಎಸ್. ಶರ್ಮಿಳಾ ಕಾರ್ಯಕ್ರಮ ಉದ್ಘಾಟಿಸಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ ವಿವೇಕಾನಂದ ಅಧ್ಯಕ್ಷತೆ ವಹಿಸಿದ್ದರು.
ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ.ಶ್ಯಾಂ ಕಶ್ಯಪ್, ಸ್ತ್ರೀಶಕ್ತಿ ಗುಂಪುಗಳ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು, ಶಿಶು ಅಭಿವೃದ್ಧಿ ಯೋಜನೆಯ ಮೇಲ್ವಿಚಾರಕಿಯರು ಹಾಗೂ ಸಿಬ್ಬಂದಿ ಇದ್ದರು. ಡಾ. ಕೃಷ್ಣ ಕೊತಾಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಡೆನಿಟಾ ನಿರೂಪಿಸಿದರು. ಹಿರಿಯ ಮೇಲ್ವಿಚಾರಕಿ ಶಾಂತಿ ಪ್ರಭು ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.