ಕೋಟ (ಬ್ರಹ್ಮಾವರ): ಚಿತ್ರಪಾಡಿಯ ಕಾರ್ತಟ್ಟು ಅಘೋರೇಶ್ವರ ಕಲಾರಂಗದ ವತಿಯಿಂದ ನೀಡುವ ರಾಜ್ಯೋತ್ಸವ ಪ್ರಶಸ್ತಿಗೆ ಯಕ್ಷಗಾನ ಕಲಾವಿದ ಹಳ್ಳಾಡಿ ಕೃಷ್ಣ ನಾಯ್ಕ ಆಯ್ಕೆಯಾಗಿದ್ದಾರೆ.
ಅವರು ಮಾರಣಕಟ್ಟೆ, ಕಮಲಶಿಲೆ, ಹಾಲಾಡಿ, ಅಮೃತೇಶ್ವರಿ, ಕಳವಾಡಿ, ಗೋಳಿಗರಡಿ ಮೇಳದಲ್ಲಿ ಕಲಾ ಸೇವೆ ಮಾಡಿ, ನಂತರ ಸುಮಾರು 34 ವರ್ಷ ಮಂದಾರ್ತಿ ಮೇಳದಲ್ಲಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ನಿವೃತ್ತಿ ಬದುಕು ನಡೆಸುತ್ತಿದ್ದಾರೆ.
ಪ್ರಶಸ್ತಿ ವಿತರಣಾ ಕಾರ್ಯಕ್ರಮ ಇದೇ 23ರಂದು ಅಘೋರೇಶ್ವರ ಸಭಾಂಗಣದಲ್ಲಿ ನಡೆಯಲಿದೆ. ಬೆಳಿಗ್ಗೆ ಪ್ರಗತಿಪರ ಕೃಷಿಕರಿಗೆ ಸನ್ಮಾನ, ಸಂಜೆಯ ಸಭಾ ಕಾರ್ಯಕ್ರಮದಲ್ಲಿ ಯಕ್ಷಗಾನ ವಿಮರ್ಶಕ, ಪ್ರಾಧ್ಯಾಪಕ ಎಸ್.ವಿ. ಉದಯಕುಮಾರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾರ್ಕಡ ತಾರನಾಥ ಹೊಳ್ಳ, ರಾಷ್ಟ್ರಮಟ್ಟದ ಹ್ಯಾಂಡ್‌ಬಾಲ್ ಕ್ರೀಡಾಪಟು ತೃಪ್ತಿ ಅವರನ್ನು ಸನ್ಮಾನಿಸಲಾಗುವುದು. ಕಿದಿಯೂರು ಉದಯ ಕುಮಾರ್ ಶೆಟ್ಟಿ, ಮುಳುಗು ತಜ್ಞ ಈಶ್ವರ ಮಲ್ಪೆ, ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸುಕನ್ಯಾ ಜಗದೀಶ್ ಭಾಗವಹಿಸುವರು ಎಂದು ಸಂಘದ ಅಧ್ಯಕ್ಷ ಉಮೇಶ ನಾಯರಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.