ADVERTISEMENT

ಪರ್ಯಾಯ: ನಗರಸಭೆಯಿಂದ ₹ 5 ಕೋಟಿ ವೆಚ್ಚದ ಕಾಮಗಾರಿ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2023, 7:08 IST
Last Updated 12 ಡಿಸೆಂಬರ್ 2023, 7:08 IST
ಯಶ್‍ಪಾಲ್ ಸುವರ್ಣ
ಯಶ್‍ಪಾಲ್ ಸುವರ್ಣ   

ಉಡುಪಿ: ಜನವರಿಯಲ್ಲಿ ನಡೆಯುವ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಪೂರ್ವಭಾವಿಯಾಗಿ ನಗರಸಭೆಯಿಂದ ₹ 5 ಕೋಟಿ ವೆಚ್ಚದಲ್ಲಿ ನಗರದ ಮೂಲ ಸೌಕರ್ಯ ಅಭಿವೃದ್ಧಿ ಕಾಮಗಾರಿಗಳು ನಡೆಯಲಿವೆ ಎಂದು ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.

ಪ್ರತಿ ಬಾರಿಯ ಪರ್ಯಾಯ ಮಹೋತ್ಸವಕ್ಕೂ ಪೂರ್ವಭಾವಿಯಾಗಿ ನಗರದ ಪ್ರಮುಖ ರಸ್ತೆಗಳ ಅಭಿವೃದ್ಧಿ, ಸ್ವಚ್ಚತೆ, ಚರಂಡಿ ದುರಸ್ತಿ, ದಾರಿ ದೀಪ ಅಳವಡಿಕೆ, ಕಿನ್ನಿಮುಲ್ಕಿ ಗೋಪುರ ಹಾಗೂ ಸರ್ಕಾರಿ ಕಟ್ಟಡಗಳಿಗೆ ಬಣ್ಣ, ದೀಪಾಲಂಕಾರ ಸಹಿತ ಹಲವು ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ನಡೆಸಲಾಗುತ್ತಿದ್ದು ಈ ಬಾರಿಯೂ ನಡೆಯಲಿದ್ದು ಈಗಾಗಲೇ ಟೆಂಡರ್ ಕರೆಯಲಾಗಿದೆ. ಶೀಘ್ರ ಕಾಮಗಾರಿ ಆರಂಭಗೊಳ್ಳಲಿದೆ.

ಪ್ರಮುಖ ರಸ್ತೆಗಳಾದ ಅಜ್ಜರಕಾಡು ವಾರ್ಡ್‌ನ ಬ್ರಹ್ಮಗಿರಿ ಸರ್ಕಲ್‌ನಿಂದ ಪುರಭವನ ರಸ್ತೆ, ಕುಂಜಿಬೆಟ್ಟು ವಾರ್ಡ್‌ನ ಕಟ್ಟೆ ಆಚಾರ್ಯ ಮಾರ್ಗ, ಕಿನ್ನಿಮುಲ್ಕಿ ವಾರ್ಡ್‌ನ ಬಿಗ್ ಬಜಾರ್ ಎದುರು ರಸ್ತೆ, ಬೈಲೂರು ವಾರ್ಡಿನ‌‌ ಅಮ್ಮಣ್ಣಿ ರಮಣ ಶೆಟ್ಟಿ ಹಾಲ್ ಮುಂಭಾಗದ ರಸ್ತೆ ವಿಸ್ತರಣೆ, ಶಾರದಾಂಬ ದ್ವಾರದಿಂದ ಹಳೆ ಸ್ಟೇಟ್ ಬ್ಯಾಂಕ್ ವರೆಗೆ ರಸ್ತೆ ವಿಸ್ತರಣೆ, ಬೀಡಿನಗುಡ್ಡೆ ಜಂಕ್ಷನ್ ನಿಂದ ಚಿಟ್ಪಾಡಿ ಜಂಕ್ಷನ್ ವರೆಗೆ ರಸ್ತೆ ಮರು ಡಾಮರೀಕರಣ ಹಾಗೂ ಚರಂಡಿ ಕಾಮಗರಿ ಸಹಿತ ಹಲವು ಕಾಮಗಾರಿಗಳಿಗೆ ಅನುದಾನ ಒದಗಿಸಲಾಗಿದೆ.

ADVERTISEMENT

ಮೂಲ ಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಮಾಡಿದ್ದು, ಕನಿಷ್ಠ ₹ 10 ಕೋಟಿ ಅನುದಾನ ಮಂಜೂರು ಮಾಡುವ ನಿರೀಕ್ಷೆಯಿದೆ ಎಂದು ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.