ADVERTISEMENT

ಹಿಂದೂಗಳ ತಾಳ್ಮೆ ಪರೀಕ್ಷೆಯ ದುಸ್ಸಾಹಸ ಬೇಡ: ಯಶ್‌ಪಾಲ್ ಸುವರ್ಣ

​ಪ್ರಜಾವಾಣಿ ವಾರ್ತೆ
Published 3 ಜುಲೈ 2024, 4:51 IST
Last Updated 3 ಜುಲೈ 2024, 4:51 IST
ಯಶ್‌ಪಾಲ್ ಸುವರ್ಣ
ಯಶ್‌ಪಾಲ್ ಸುವರ್ಣ   

ಉಡುಪಿ: ‘ಅಲ್ಪಸಂಖ್ಯಾತರ ಓಲೈಕೆಗಾಗಿ ರಾಹುಲ್ ಗಾಂಧಿ ಅವರು ಹಿಂದುತ್ವ, ರಾಷ್ಟ್ರೀಯ ಸ್ವಯಂ ಸೇವಕ ಸಂಘ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಹೇಳನ ಮಾಡುವ ಮೂಲಕ ತಮ್ಮ ನೈತಿಕ ಅಧಃಪತನವನ್ನು ಜಗಜ್ಜಾಹೀರು ಮಾಡಿದ್ದು, ಹಿಂದೂಗಳ ತಾಳ್ಮೆ ಪರೀಕ್ಷೆ ಮಾಡುವ ದುಸ್ಸಾಹಸಕ್ಕೆ ಮುಂದಾಗಬಾರದು’ ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಂದೂ ಧರ್ಮಕ್ಕೆ ಪ್ರೀತಿ ಸಹೋದರತೆಯ ಪಾಠ ಮಾಡುವ ಮೊದಲು ಅಂದು 5 ಲಕ್ಷ ಕಾಶ್ಮೀರಿ ಹಿಂದೂಗಳನ್ನು ಓಡಿಸಿದವರು, ಅಮಾಯಕ ಕನ್ಹಯ್ಯ ಲಾಲ್‌ನನ್ನು ಹತ್ಯೆ ಮಾಡಿದವರು, ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರು, ಡಿಜೆ ಹಳ್ಳಿ, ಕೆಜೆ ಹಳ್ಳಿಯಲ್ಲಿ ದಲಿತನ ಮನೆ, ಪೊಲೀಸ್ ಠಾಣೆಗೆ ಬೆಂಕಿ ಇಟ್ಟವರು ಯಾರು ಎಂಬುದನ್ನು ಕೂಡ ಲೋಕಸಭೆಯಲ್ಲಿ ಹೇಳುವ ಧೈರ್ಯ ರಾಹುಲ್ ಗಾಂಧಿಗೆ ಇದೆಯೇ ಎಂದು ಪ್ರಶ್ನಿಸಿದ್ದಾರೆ.

ಹಿಂದೂ ಧರ್ಮಕ್ಕೆ ಹಿಂಸೆಯ ಬಣ್ಣ ಬಳಿಯುವ ಮೂಲಕ ಸನಾತನ ಹಿಂದೂ ಧರ್ಮಕ್ಕೆ ರಾಹುಲ್ ಗಾಂಧಿ ಅಪಮಾನ ಮಾಡಿದ್ದಾರೆ. 49 ಸೀಟುಗಳು ಕೊಟ್ಟಾಗ ಹಿಂದುತ್ವ ಕೆಟ್ಟದು, ಹಿಂದೂಗಳು ಒಳ್ಳೆಯವರು ಎಂದಿದ್ದರು. 99 ಸೀಟುಗಳು ಸಿಕ್ಕಿದ ಕೂಡಲೇ ಈಗ ಹಿಂದೂಗಳೇ ಹಿಂಸೆ ಮಾಡುವವರು ಎನ್ನುವ ಮೂಲಕ ತಮ್ಮ ಹಿಂದೂ ವಿರೋಧಿ ನಿಲುವನ್ನು ಪ್ರದರ್ಶಿಸಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.