ADVERTISEMENT

ಕಾನೂನಿನ ಅಜ್ಞಾನದಿಂದ ಅವಾಂತರ: ಶ್ರೀಶಾನಂದ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2011, 6:50 IST
Last Updated 22 ಆಗಸ್ಟ್ 2011, 6:50 IST

ಕಾರವಾರ: ಜೀವನದಲ್ಲಿ ನಡೆಯುವ ಅನೇಕ ಘಟನೆಗಳು ಅವಾಂತರವನ್ನುಂಟು ಮಾಡುತ್ತವೆ. ಕಾನೂನು ಅರಿವಿನ ಕೊರತೆಯೇ ಇದಕ್ಕೆ ಕಾರಣ ಎಂದು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ವಿ ಶ್ರೀಶಾನಂದ ಹೇಳಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ವಕೀಲರ ಸಂಘ ಆಶ್ರಯದಲ್ಲಿ ತಾಲ್ಲೂಕಿನ ಮಾಜಾಳಿಯ ಚೌಚಾರ ದೇವಸ್ಥಾನದ ಆವರಣದಲ್ಲಿ ಶನಿವಾರ ನಡೆದ ಕಾನೂನು ಸಾಕ್ಷರತಾ ಕಾರ್ಯಕ್ರಮ ಉದ್ಫಾಟಿಸಿ ಮಾತನಾಡಿದ ಅವರು, ಕಾನೂನು ನೆರವು ಬೇಕಾದಲ್ಲಿ ಕಾನೂನು ಸೇವಾ ಪ್ರಾಧಿಕಾರವನ್ನು ಸಂಪರ್ಕಿಸಿ ಕಾನೂನಿನ ನೆರವು ಪಡೆಯಬೇಕು ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಬಿ. ನಾರಾಯಣಪ್ಪ ಮಾತನಾಡಿ, ಕಾನೂನು ತಿಳಿಯದೇ ಮಾಡಿದ ಅಪರಾಧವೂ ಕ್ಷಮೆಗೆ ಅರ್ಹವ್ಲ್ಲಲ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಸಿ. ಎನ್. ಹೊಳಿಹೊಸೂರು ಅವರು ಮಹಿಳೆಯರಿಗೆ ಮತ್ತು ಮಕ್ಕಳಿಗೆ ಸಿಗುವ ಸೌಲಭ್ಯ, ಕಾನೂನುಗಳು ಮತ್ತು ಸರ್ಕಾರಿ ಆದೇಶಗಳ ಕುರಿತು ವಿವರವಾದ ಮಾಹಿತಿ ನೀಡಿದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಆರ್. ಎಸ್. ಹೆಗಡೆ ಗಾಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜೆ.ಎಂ.ಎಫ್.ಸಿ ನ್ಯಾಯಾಧೀಶ ಶ್ರೀನಿವಾಸ ಬುದಾರಪುರ, ಜಿಲ್ಲಾ ಪಂಚಾಯಿತಿ ಸದಸ್ಯೆ ಜಯಮಾಲಾ ಕೋಳಂಬಕರ, ಮಾಜಾಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ  ಪ್ರಮೀಳಾ ನಾಯ್ಕ, ತಾಲ್ಲೂಕುಕ ಪಂಚಾಯಿತಿ ಸದಸ್ಯೆ ಸವಿತಾ ಸಿದ್ದಿ, ಜಿಲ್ಲಾ ನ್ಯಾಯವಾದಿ ಸಂಘದ ಕಾರ್ಯದರ್ಶಿ ಸಂಜಯ ಸಾಳುಂಕೆ ವೇದಿಕೆಯಲ್ಲಿದ್ದರು.
ಜಿಲ್ಲಾ ನಿರೂಪಣಾಧಿಕಾರಿ ಎಲ್. ಕೆ. ದೇಶಪಾಂಡೆ ಕಾರ್ಯಕ್ರಮ ನಿರೂಪಿಸಿದರು. ಶಿಶುಅಭಿವೃದ್ಧಿ ಯೋಜನಾಧಿಕಾರಿ ಎಲ್.ಎಲ್. ರಾಥೋಡ್ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.