ADVERTISEMENT

ಉತ್ತರಕನ್ನಡ–ಕಾಂಗ್ರೆಸ್‌ ಅಭ್ಯರ್ಥಿಗೇ ಟಿಕೆಟ್‌ ನೀಡುವಂತೆ ಕಾರ್ಯಕರ್ತರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2019, 7:05 IST
Last Updated 15 ಮಾರ್ಚ್ 2019, 7:05 IST
   

ಶಿರಸಿ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಟಿಕೆಟ್ಅನ್ನು ಕಾಂಗ್ರೆಸ್ ಅಭ್ಯರ್ಥಿಗೆ ನೀಡಬೇಕು ಎಂದು ಒತ್ತಾಯಿಸಿ, ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾ ಕಚೇರಿ ಎದುರು ಟೈಯರ್‌ಗೆ ಬೆಂಕಿ ಹಚ್ಚಿ, ಕುರ್ಚಿ ಮುರಿದು ಪ್ರತಿಭಟಿಸಿದರು.

ಕಾಂಗ್ರೆಸ್‌ಗೆ ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡಿದ ಕಾರ್ಯಕರ್ತರು, ಜಿಲ್ಲಾ ಘಟಕದ ಅಧ್ಯಕ್ಷ ಭೀಮಣ್ಣ ನಾಯ್ಕ ಸ್ಥಳಕ್ಕೆ ಬರುವಂತೆ ಆಗ್ರಹಿಸಿದರು.

ಸ್ಥಳಕ್ಕೆ ಬಂದ ಭೀಮಣ್ಣ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು, ನ್ಯಾಯ ಸಿಗುವವರೆಗೆ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.