ಭಟ್ಕಳ: ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ ತೆಂಗಿನಗುಂಡಿ ಕ್ರಾಸ್ ಬಳಿ ಸೋಮವಾರ ಬೆಳಿಗ್ಗೆ ಪರವಾನಗಿ ಇಲ್ಲದೇ ಕಂಟೆನರ್ ವಾಹನದಲ್ಲಿ ಜಾನುವಾರು ಸಾಗಾಟ ಮಾಡುವಾಗ ಶಹರ ಠಾಣಾ ಪೊಲೀಸರು ದಾಳಿ ನಡೆಸಿ ವಾಹನ ವಶಪಡಿಸಿಕೊಂಡಿದ್ದು, ಆರೋಪಿಗಳನ್ನು ಬಂಧಿಸಿದ್ದಾರೆ.
ಮೈಸೂರು ಜಿಲ್ಲೆಯ ಕೆ.ಆರ್.ನಗರ ನಿವಾಸಿ ರಾಘವೇಂದ್ರ ನಾಗೇಂದ್ರ (30) ಹಾಗೂ ಪಿರಿಯಾಪಟ್ಟಣ ನಿವಾಸಿ ಆಯೂಬ್ ಅಹ್ಮದ (40) ಜೊತೆಗೂಡಿ ವದೆ ಮಾಡುವ ಉದ್ದೇಶದಿಂದ ₹5.50 ಲಕ್ಷ ಮೌಲ್ಯದ 11 ಕೋಣ ಹಾಗೂ ₹2.50 ಲಕ್ಷ ಮೌಲ್ಯದ 5 ಎಮ್ಮೆಯನ್ನು ವಾಹನದಲ್ಲಿ ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.