ADVERTISEMENT

ವಾಣಿಜ್ಯ ತೆರಿಗೆ ಪರಿವೀಕ್ಷಕ ಪರೀಕ್ಷೆ: ವಸ್ತ್ರಸಂಹಿತೆ ಪಾಲನೆಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 19 ಜನವರಿ 2024, 15:26 IST
Last Updated 19 ಜನವರಿ 2024, 15:26 IST
<div class="paragraphs"><p>ಪರೀಕ್ಷೆ</p></div>

ಪರೀಕ್ಷೆ

   

ಕಾರವಾರ: ಕರ್ನಾಟಕ ಲೋಕಸೇವಾ ಆಯೋಗ ವತಿಯಿಂದ ಜ.20 ಮತ್ತು 21 ರಂದು ಜಿಲ್ಲೆಯಲ್ಲಿ ನಡೆಯಲಿರುವ ವಾಣಿಜ್ಯ ತೆರಿಗೆ ಇಲಾಖೆಯ ತೆರಿಗೆ ಪರಿವೀಕ್ಷಕರ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳು ತುಂಬು ತೋಳಿನ ಬಟ್ಟೆ, ಆಭರಣ ಧರಿಸಿ ಕೊಠಡಿಗೆ ಬರುವುದನ್ನು ನಿಷೇಧಿಸಲಾಗಿದೆ.

‘ಪರೀಕ್ಷೆ ಕೇಂದ್ರಕ್ಕೆ ಎರಡು ತಾಸು ಮುನ್ನವೇ ಅಭ್ಯರ್ಥಿಗಳು ಹಾಜಾಗಿರಬೇಕು. ಕೇಂದ್ರಕ್ಕೆ ಶೂ,ಸಾಕ್ಸ್ ಧರಿಸಿ ಬರಲು ಅವಕಾಶವಿಲ್ಲ. ಎಲೆಕ್ಟ್ರಾನಿಕ್ ಉಪಕರಣ, ನೀರಿನ ಬಾಟಲಿ ತರುವಂತೆಯೂ ಇಲ್ಲ. ಧಾರ್ಮಿಕ ಆಚರಣೆಗೆ ಸಂಬಂಧಿಸಿದ ವಸ್ತುಗಳನ್ನು ಧರಿಸಿ ಬರುವ ಅಭ್ಯರ್ಥಿಗಳು ವಿಶೇಷ ತಪಾಸಣೆಗೆ ಒಳಪಡಬೇಕಾಗಿರುತ್ತದೆ. ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕಾಗುತ್ತದೆ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ ರಜಪೂತ ಆದೇಶಿಸಿದ್ದಾರೆ.

ADVERTISEMENT

ಮುರುಡೇಶ್ವರ ಜಾತ್ರೆ: ಮದ್ಯ ಮಾರಾಟ ನಿಷೇಧ

ಕಾರವಾರ: ಜಿಲ್ಲೆಯ ಭಟ್ಕಳ ತಾಲ್ಲೂಕಿನ ಮುರುಡೇಶ್ವರದಲ್ಲಿ ಶನಿವಾರ ನಡೆಯಲಿರುವ ಮಾತ್ಹೋಬಾರ ಮುರುಡೇಶ್ವರ ದೇವಸ್ಥಾನದ ಮಹಾರಥೋತ್ಸವದ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಆದೇಶಿಸಿದ್ದಾರೆ.

‘ಜ.20ರ ಬೆಳಿಗ್ಗೆ 6 ಗಂಟೆಯಿಂದ ಜ.21ರ ಬೆಳಿಗ್ಗೆ 6 ಗಂಟೆವರೆಗೆ ಮುರುಡೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮದ್ಯದಂಗಡಿ, ವೈನ್ ಶಾಪ್ ಮುಚ್ಚಬೇಕು. ಮದ್ಯ ಸಾಗಾಟ ಹಾಗೂ ಮಾರಾಟವನ್ನು ಸ್ಥಗಿತಗೊಳಿಸಬೇಕು’ ಎಂದು ಆದೇಶಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.