ಕಾರವಾರ: ‘ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿರುವ ರಾಜ್ಯ ಸರ್ಕಾರ ಈ ನೆಪದಲ್ಲಿ ಅಭಿವೃದ್ಧಿ ಯೋಜನೆಗಳನ್ನು ಕುಂಠಿತಗೊಳಿಸಬಾರದು’ ಎಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ನೀಲಕಂಠ ಕೆ.ಎನ್. ಹೇಳಿದರು.
ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಡವರು, ಮಧ್ಯಮ ವರ್ಗದ ಜನರಿಗೆ ನೆರವಾಗುವ ಗ್ಯಾರಂಟಿ ಯೋಜನೆ ಜಾರಿಯನ್ನು ಸ್ವಾಗತಿಸುತ್ತೇವೆ. ಆದರೆ ನಗರ, ಗ್ರಾಮೀಣ ಭಾಗದಲ್ಲಿ ರಸ್ತೆ, ಕುಡಿಯುವ ನೀರು ಸೇರಿದಂತೆ ಎಲ್ಲ ರೀತಿಯ ಮೂಲಸೌಕರ್ಯಗಳನ್ನೂ ಒದಗಿಸುವ ಕೆಲಸ ನಿರಂತರವಾಗಿ ನಡೆಯಬೇಕು’ ಎಂದು ಒತ್ತಾಯಿಸಿದರು.
‘ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ರಾಜಕೀಯ ಕಾರಣಕ್ಕೆ ಹಾಳುಗೆಡಹುವ ಪ್ರಯತ್ನ ನಡೆಯುತ್ತಿದೆ. ದೇಶದ ಹಲವೆಡೆ ಹಿಂಸಾಚಾರ ನಡೆಯುತ್ತಿರುವುದು ಇದಕ್ಕೆ ಕಾರಣ. ಜಿಲ್ಲೆ ಮತ್ತು ರಾಜ್ಯದಲ್ಲಿ ಅಂತಹ ಸ್ಥಿತಿ ಎದುರಾಗದಂತೆ ಎಚ್ಚರಿಕೆ ವಹಿಸಬೇಕು’ ಎಂದರು.
ಜಿಲ್ಲಾ ಘಟಕದ ಉಪಾಧ್ಯಕ್ಷ ವಿನಾಯಕ ನಾಯ್ಕ, ಗಣಪತಿ ನಾಯ್ಕ, ಸಂದೀಪ ನಾಯ್ಕ, ಫಕೀರ ಸಾಳುಂಕೆ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.