ADVERTISEMENT

ಸತೀಶ್ ಸೈಲ್‌ರನ್ನು ನಿಂದಿಸಿದ ಆರೋಪ: ರೂಪಾಲಿ ನಾಯ್ಕ ವಿರುದ್ಧ ಎಫ್‌ಐಆರ್‌ಗೆ ಆಗ್ರಹ

ಜಿಲ್ಲಾಧಿಕಾರಿ ಕಚೇರಿ ಎದುರು ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ:ಆಗ್ರಹ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2023, 12:58 IST
Last Updated 6 ಮಾರ್ಚ್ 2023, 12:58 IST
ಶಾಸಕಿ ರೂಪಾಲಿ ನಾಯ್ಕ ಮೇಲೆ ಎಫ್.ಐ.ಆರ್ ದಾಖಲಿಸಲು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಕಾರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು
ಶಾಸಕಿ ರೂಪಾಲಿ ನಾಯ್ಕ ಮೇಲೆ ಎಫ್.ಐ.ಆರ್ ದಾಖಲಿಸಲು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಕಾರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು   

ಕಾರವಾರ: ಮಾ.3ರಂದು ಜಿಲ್ಲಾ ಪಂಚಾಯ್ತಿ ಕಚೇರಿಯಲ್ಲಿ ಮಾಜಿ ಶಾಸಕ ಸತೀಶ್ ಸೈಲ್ ಅವರನ್ನು ಶಾಸಕಿ ರೂಪಾಲಿ ನಾಯ್ಕ ನಿಂದಿಸಿ, ಹಲ್ಲೆ ನಡೆಸಲು ಯತ್ನಿಸಿದ್ದಾರೆ ಎಂದು ಆರೋಪಿಸಿದ ಕಾಂಗ್ರೆಸ್ ಕಾರ್ಯಕರ್ತರು ಶಾಸಕಿ ವಿರುದ್ಧ ಎಫ್.ಐ.ಆರ್ ದಾಖಲಿಸಲು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಇಲ್ಲಿನ ಮಿತ್ರ ಸಮಾಜ ಮೈದಾನದಿಂದ ಮೆರವಣಿಗೆ ಆರಂಭಿಸಲಾಯಿತು. ಮುಖ್ಯ ರಸ್ತೆಗಳಲ್ಲಿ ಸಾಗಿ ಬಂದ ಮೆರವಣಿಗೆಯಲ್ಲಿ ಶಾಸಕಿ ವಿರುದ್ಧ ಘೋಷಣೆ ಕೂಗಲಾಯಿತು.

ಪ್ರತಿಭಟನೆ ನೇತೃತ್ವ ವಹಿಸಿದ್ದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಮೀರ ನಾಯ್ಕ ಮಾತನಾಡಿ, ‘ಸತೀಶ್ ಸೈಲ್ ಅವರನ್ನು ಮದ್ಯ ವ್ಯಸನಿ ಎಂದು ಸಾರ್ವಜನಿಕವಾಗಿ ಜರಿಯುವ ಮೂಲಕ ಶಾಸಕಿ ರೂಪಾಲಿ ನಾಯ್ಕ ಅತಿರೇಕದ ವರ್ತನೆ ಪ್ರದರ್ಶಿಸಿದ್ದಾರೆ. ಅಲ್ಲದೆ ಪೇಪರ್ ವೇಟ್‌ನಿಂದ ನಡೆಸಲು ಮುಂದಾಗಿದ್ದರು. ಅಧಿಕಾರಿ, ಗ್ರಾಮ ಪಂಚಾಯ್ತಿ ಸದಸ್ಯರ ಎದುರೇ ಇಂತಹ ಘಟನೆ ನಡೆದಿದ್ದು ಶಾಸಕರ ದರ್ಪ ಬಹಿರಂಗವಾಗಿದೆ’ ಎಂದು ಆರೋಪಿಸಿದರು.

ADVERTISEMENT

‘ತನ್ನ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದರ ಬಗ್ಗೆ ಸತೀಶ್ ಸೈಲ್ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದರೂ ಪೊಲೀಸರು ಈವರೆಗೆ ಎಫ್.ಐ.ಆರ್ ದಾಖಲಿಸಿಲ್ಲ. ಕೂಡಲೆ ಶಾಸಕರ ವಿರುದ್ಧ ಎಫ್.ಐ.ಆರ್ ದಾಖಲಿಸಬೇಕು’ ಎಂದು ಪಟ್ಟು ಹಿಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಅವರಿಗೆ ದೂರು ನೀಡಲಾಯಿತು. ನಗರಸಭೆ ಸದಸ್ಯರಾದ ಸುಹಾನಿ ಪಾಟೀಲ, ಸ್ನೇಹಲ್ ಹರಿಕಂತ್ರ, ಪ್ರಮುಖರಾದ ಕೃಷ್ಣ ಮೇಥಾ, ಜಿ.ಪಿ. ನಾಯಕ, ಲೀಲಾಬಾಯಿ ಠಾಣೇಕರ, ಅನಿಲ ನಾಯ್ಕ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.