ADVERTISEMENT

ನಿರೀಕ್ಷಿತ ಮಟ್ಟದಲ್ಲಿ ಆಗದ ಗ್ರಾಮಗಳ ಅಭಿವೃದ್ಧಿ: ಶಾಸಕ ಭೀಮಣ್ಣ ನಾಯ್ಕ

ಬೇಡ್ಕಣಿಯ ಜೇಡಗೆರೆ ಹಸ್ತಾಂತರ, ಬಾಗಿನ ಸಮರ್ಪಣೆ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2024, 14:14 IST
Last Updated 23 ನವೆಂಬರ್ 2024, 14:14 IST
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಮ್ಮೂರು ನಮ್ಮ ಕೆರೆ ಯೋಜನೆಯಡಿ ಅಭಿವೃದ್ಧಿಗೊಂಡ ಸಿದ್ಧಾಪುರ ತಾಲ್ಲೂಕಿನ ಬೇಡ್ಕಣಿಯ ಜೇಡಗೆರೆ ಹಸ್ತಾಂತರ ಮತ್ತು ಬಾಗಿನ ಸಮರ್ಪಣೆ ಕಾರ್ಯಕ್ರಮವನ್ನು ಭೀಮಣ್ಣ ನಾಯ್ಕ ಉದ್ಘಾಟಿಸಿದರು
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಮ್ಮೂರು ನಮ್ಮ ಕೆರೆ ಯೋಜನೆಯಡಿ ಅಭಿವೃದ್ಧಿಗೊಂಡ ಸಿದ್ಧಾಪುರ ತಾಲ್ಲೂಕಿನ ಬೇಡ್ಕಣಿಯ ಜೇಡಗೆರೆ ಹಸ್ತಾಂತರ ಮತ್ತು ಬಾಗಿನ ಸಮರ್ಪಣೆ ಕಾರ್ಯಕ್ರಮವನ್ನು ಭೀಮಣ್ಣ ನಾಯ್ಕ ಉದ್ಘಾಟಿಸಿದರು   

ಸಿದ್ದಾಪುರ: ‘ಸ್ವಾತಂತ್ರ್ಯ ಬಂದು ಹಲವು ವರ್ಷಗಳೇ ಕಳೆದರೂ ಗ್ರಾಮೀಣ ಭಾಗದ ಅಭಿವೃದ್ಧಿ ಆಗದಿರುವುದು ನೋವಿನ ಸಂಗತಿ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವು ಯೋಜನೆಗಳನ್ನು ಜಾರಿಗೆ ತಂದರೂ ಗ್ರಾಮೀಣ ಭಾಗಗಳ ಅಭಿವೃದ್ಧಿ ನಿರೀಕ್ಷಿತ ಮಟ್ಟದಲ್ಲಿ ಆಗಿಲ್ಲ’ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಮ್ಮೂರು ನಮ್ಮ ಕೆರೆ ಯೋಜನೆಯಡಿ ಶನಿವಾರ  ನಡೆದ ಅಭಿವೃದ್ಧಿಗೊಂಡ ತಾಲ್ಲೂಕಿನ ಬೇಡ್ಕಣಿಯ ಜೇಡಗೆರೆ ಹಸ್ತಾಂತರ ಮತ್ತು ಬಾಗಿನ ಸಮರ್ಪಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕೆರೆ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಬಿ ಎನ್ ಜಯಪ್ರಕಾಶ ಅಧ್ಯಕ್ಷತೆ ವಹಿಸಿದ್ದರು.

ADVERTISEMENT

ಸ್ಥಳೀಯ ಗ್ರಾಮ ಪಂಚಾಯಿತಿ ಅಧ್ಯಕ್ಷ ಉಲ್ಲಾಸ ಗೌಡರ್, ಧಾರವಾಡ ಹಾಲು ಒಕ್ಕೂಟದ ನಿರ್ದೇಶಕ ಪರಶುರಾಮ ನಾಯ್ಕ, ತಾಲ್ಲೂಕು ಗ್ಯಾರೆಂಟಿ ಅನುಷ್ಠಾನ ಯೋಜನೆಯ ಅಧ್ಯಕ್ಷ ಕೆ.ಜಿ.ನಾಗರಾಜ, ಪ್ರಮುಖರಾದ ವಿ.ಎನ್.ನಾಯ್ಕ, ನಾಗರಾಜ ನಾಯ್ಕ, ಜಿಲ್ಲಾ ಜನಜಾಗೃತಿ ಯೋಜನೆಯ ನಿಕಟ ಪೂರ್ವ ಅಧ್ಯಕ್ಷ ಸುಭಾಷ ಎಚ್ ನಾಯ್ಕ, ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯ ರಮೇಶ ಹಾರ್ಸಿಮನೆ, ಪಿಡಿಒ ಈರಣ್ಣ ಇಲಾಳ ಇದ್ದರು.

ಗ್ರಾಮಾಭಿವೃದ್ಧಿ ಯೋಜನೆಯ ಕ್ಷೇತ್ರ ಯೋಜನಾಧಿಕಾರಿ ಗಿರೀಶ ಜಿ.ಪಿ ಸ್ವಾಗತಿಸಿದರು. ಜಿಲ್ಲಾ ನಿರ್ದೇಶಕ ಎ.ಬಾಬು ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಭಾ ಕಾರ್ಯಕ್ರಮಕ್ಕೂ ಮೊದಲು ಜೇಡಗೆರೆ ಕೆರೆಗೆ ಶಾಸಕ ಭೀಮಣ್ಣ ನಾಯ್ಕ ಬಾಗಿನ ಸಮರ್ಪಣೆ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.