ADVERTISEMENT

ಜನರ ಬೇಡಿಕೆಗೆ ಅನುಗುಣವಾಗಿ ಅಭಿವೃದ್ಧಿ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

​ಪ್ರಜಾವಾಣಿ ವಾರ್ತೆ
Published 15 ಜೂನ್ 2024, 14:22 IST
Last Updated 15 ಜೂನ್ 2024, 14:22 IST
ವಿಶ್ವೇಶ್ವರ ಹೆಗಡೆ ಕಾಗೇರಿ
ವಿಶ್ವೇಶ್ವರ ಹೆಗಡೆ ಕಾಗೇರಿ   

ಕಾರವಾರ: ‘ಕ್ಷೇತ್ರದ ಜನರ ಬೇಡಿಕೆಗಳೇನು ಎಂಬುದನ್ನು ಪರಿಗಣಿಸಿ ಹಂತ ಹಂತವಾಗಿ ನನ್ನ ಕಾರ್ಯವ್ಯಾಪ್ತಿಯಲ್ಲಿ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತರುತ್ತೇನೆ’ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

‘ಉತ್ತರ ಕನ್ನಡ ಕ್ಷೇತ್ರದ ಅಗತ್ಯತೆಯ ಕುರಿತು ಜನರ ಅಭಿಪ್ರಾಯ ಸಂಗ್ರಹಿಸಿ, ಅದನ್ನು ಜನತೆಯ ಎದುರಿಗೆ ತೆರೆದಿಟ್ಟ ‘ಪ್ರಜಾವಾಣಿ’ ದಿನಪತ್ರಿಕೆಯ ಪ್ರಯತ್ನ ಮೆಚ್ಚುವಂತದ್ದು. ಪತ್ರಿಕೆ ಆಡಳಿತ ವ್ಯವಸ್ಥೆ ಮತ್ತು ಜನಸಾಮಾನ್ಯರ ನಡುವೆ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂಬುದಕ್ಕೆ ಇದು ಸಾಕ್ಷಿ’ ಎಂದು ಅವರು ‘ಸಂಸದರಿಂದ ಜನರ ನಿರೀಕ್ಷೆಗಳೇನು?’ ಎಂಬ ಜನರ ಅಭಿಪ್ರಾಯದ ಸರಣಿಗೆ ಮೆಚ್ಚುಗೆ ಸೂಚಿಸಿದರು.

‘ರೈಲ್ವೆ ಯೋಜನೆ, ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ, ಪ್ರವಾಸೋದ್ಯಮ ಕ್ಷೇತ್ರಗಳ ಅಭಿವೃದ್ಧಿ ಸೇರಿದಂತೆ ಹತ್ತಾರು ವಿಷಯಗಳನ್ನು ಜನರು ತೆರೆದಿಟ್ಟಿದ್ದಾರೆ. ಜನರ ಅಭಿಪ್ರಾಯಗಳನ್ನು ಗೌರವಿಸುತ್ತೇನೆ. ಅವರ ಬೇಡಿಕೆಗಳಿಗೆ ಸ್ಪಂದಿಸುವ ಜವಾಬ್ದಾರಿಯನ್ನು ನಿಸ್ಸಂಶಯವಾಗಿ ನಿಭಾಯಿಸುವ ಭರವಸೆ ನೀಡುತ್ತೇನೆ’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.