ADVERTISEMENT

ನರೇಗಾ ಮಾಹಿತಿ ಹಂಚಿಕೆಗೆ ಡಿಜಿಟಲ್ ತಂತ್ರಜ್ಞಾನ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2024, 15:51 IST
Last Updated 28 ಅಕ್ಟೋಬರ್ 2024, 15:51 IST
ಕಾರವಾರ ತಾಲ್ಲೂಕಿನ ಚೆಂಡಿಯಾ ಗ್ರಾಮದಲ್ಲಿ ನರೇಗಾ ಯೋಜನೆ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು
ಕಾರವಾರ ತಾಲ್ಲೂಕಿನ ಚೆಂಡಿಯಾ ಗ್ರಾಮದಲ್ಲಿ ನರೇಗಾ ಯೋಜನೆ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು   

ಕಾರವಾರ: ‘ನರೇಗಾ ಯೋಜನೆಯ ಮಾಹಿತಿಯನ್ನು ಜನರಿಗೆ ಸುಲಭವಾಗಿ ತಲುಪಿಸಲು ಡಿಜಿಟಲ್ ತಂತ್ರಜ್ಞಾನ ಬಳಕೆ ಮಾಡಲಾಗುತ್ತಿದೆ. ಯೋಜನೆಯ ಸೌಲಭ್ಯವನ್ನು ಜನರು ಸದುಪಯೋಗಪಡಿಸಿಕೊಳ್ಳುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ’ ಎಂದು ತಾಲ್ಲೂಕು ಪಂಚಾಯಿತಿ ನರೇಗಾ ಯೋಜನೆ ವಿಭಾಗದ ಸಹಾಯಕ ನಿರ್ದೇಶಕ ಸಂದೀಪ್ ಕೋಠಾರಕರ ಹೇಳಿದರು.

ತಾಲ್ಲೂಕಿನ ಚೆಂಡಿಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ಸೋಮವಾರ ನರೇಗಾ ಯೋಜನೆಯಡಿ 2025–26ನೇ ಸಾಲಿನ ಕ್ರಿಯಾ ಯೋಜನೆ ಸಿದ್ದಪಡಿಸುವ ಸಲುವಾಗಿ ಐಇಸಿ ಚಟುವಟಿಕೆಗಳಡಿ ಹಮ್ಮಿಕೊಂಡಿದ್ದ ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ ಅಭಿಯಾನದಲ್ಲಿ ಅವರು ಮಾತನಾಡಿದರು.

‘ನರೇಗಾ ಮಾಹಿತಿ ಹಾಗೂ ಕ್ಯೂಆರ್ ಕೋಡ್‌ ಉಳ್ಳ ಕರಪತ್ರಗಳನ್ನು ಸಾರ್ವಜನಿಕರಿಗೆ ವಿತರಿಸಲಾಗುತ್ತಿದೆ. ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದರೆ ಯೋಜನೆಯ ಸಂಪೂರ್ಣ ಮಾಹಿತಿ ಲಭಿಸುತ್ತದೆ. ಪ್ರತಿಯೊಂದು ಹಳ್ಳಿಗಳ ಜನಸಾಮಾನ್ಯರು ಹಾಗೂ ಸ್ವ-ಸಹಾಯ ಸಂಘದ ಮಹಿಳೆಯರು ನರೇಗಾದಡಿ ಲಭ್ಯವಿರುವ ವೈಯಕ್ತಿಕ ಕಾಮಗಾರಿಗಳ ಸೌಲಭ್ಯ ತೆಗೆದುಕೊಂಡು ಆರ್ಥಿಕವಾಗಿ ಸಬಲರಾಗಬೇಕು’ ಎಂದರು.

ADVERTISEMENT

ಜಿಲ್ಲಾ ಪಂಚಾಯಿತಿಯ ಜಿಲ್ಲಾ ಐಇಸಿ ಸಂಯೋಜಕ ಫಕೀರಪ್ಪ ತುಮ್ಮಣ್ಣನವರ ಮಾತನಾಡಿದರು.

ಗ್ರಾಮ ಪಂಚಾಯತಿ ಅಧ್ಯಕ್ಷೆ ಪೂಜಾ ನಾಯ್ಕ, ಉಪಾಧ್ಯಕ್ಷ ಜ್ಯೋಗಿ ಗುನಗಿ, ಸದಸ್ಯರು, ಪಿಡಿಒ ಮಂಜುನಾಥ ಟಿ.ಸಿ., ತಾಲ್ಲೂಕು ಪಂಚಾಯಿತಿ ತಾಂತ್ರಿಕ ಸಂಯೋಜಕ ಸೂರಜ್ ಗುನಗಿ, ತಾಂತ್ರಿಕ ಸಹಾಯಕ ಅಭಿಯಂತರ ಪ್ರಕಾಶ ನಾಯ್ಕ, ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.