ADVERTISEMENT

ಕಾರವಾರ: ಅಂಗವಿಕಲರಿಗೆ ವಿದ್ಯುತ್ ಚಾಲಿತ ವಾಹನ ನೀಡಲು ಮನವಿ

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2021, 14:24 IST
Last Updated 12 ನವೆಂಬರ್ 2021, 14:24 IST
ಅಂಗವಿಕಲರಿಗೆ ವಿದ್ಯುತ್ ಚಾಲಿತ ವಾಹನಗಳನ್ನು ನೀಡಬೇಕು ಎಂದು ಒತ್ತಾಯಿಸಿ ಜನಶಕ್ತಿ ವೇದಿಕೆಯ ಅಧ್ಯಕ್ಷ ಮಾಧವ ನಾಯಕ ಅವರು ಉಪ ವಿಭಾಗಾಧಿಕಾರಿ ವಿದ್ಯಾಶ್ರೀ ಚಂದರಗಿ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು
ಅಂಗವಿಕಲರಿಗೆ ವಿದ್ಯುತ್ ಚಾಲಿತ ವಾಹನಗಳನ್ನು ನೀಡಬೇಕು ಎಂದು ಒತ್ತಾಯಿಸಿ ಜನಶಕ್ತಿ ವೇದಿಕೆಯ ಅಧ್ಯಕ್ಷ ಮಾಧವ ನಾಯಕ ಅವರು ಉಪ ವಿಭಾಗಾಧಿಕಾರಿ ವಿದ್ಯಾಶ್ರೀ ಚಂದರಗಿ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು   

ಕಾರವಾರ: ಅಂಗವಿಕಲರಿಗೆ ಸರ್ಕಾರದಿಂದ ವಿದ್ಯುತ್ ಚಾಲಿತ ತ್ರಿಚಕ್ರ ವಾಹನಗಳನ್ನು ನೀಡಬೇಕು. ಅವುಗಳಿಗೆ ಉಚಿತ ವಿಮೆ ಮಾಡಿಸಬೇಕು ಎಂದು ಜನಶಕ್ತಿ ವೇದಿಕೆಯಿಂದ ಉಪ ವಿಭಾಗಾಧಿಕಾರಿ ಮೂಲಕ ಜಿಲ್ಲಾಧಿಕಾರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.

ಸರ್ಕಾರವು ಅಂಗವಿಕಲರಿಗೆ ಅನುಕೂಲವಾಗುವಂತೆ ತ್ರಿಚಕ್ರ ವಾಹನಗಳನ್ನು ನೀಡುತ್ತಿರುವುದು ಸ್ವಾಗತಾರ್ಹ. ಆದರೆ, ಇತ್ತೀಚಿಗೆ ಪೆಟ್ರೋಲ್ ದರವು ನಿರಂತರವಾಗಿ ಏರಿಕೆಯಾಗುತ್ತಿದೆ. ಇದರಿಂದ ಜನಸಾಮಾನ್ಯರಿಗೇ ಕಷ್ಟವಾಗುತ್ತಿದೆ. ಹಾಗಿರುವಾಗ, ಅಂಗವಿಕಲರಿಗೆ ಪೆಟ್ರೋಲ್‌ ಚಾಲಿತ ಬೈಕ್‌ಗಳು ಆರ್ಥಿಕವಾಗಿ ಇನ್ನಷ್ಟು ಹೊರೆಯಾಗಲಿದೆ ಎಂದು ಮನವಿಯಲ್ಲಿ ಅಭಿಪ್ರಾಯ ಪಡಲಾಗಿದೆ.

ಇನ್ನುಮುಂದೆ, ಸರ್ಕಾರದಿಂದ ಅಂಗವಿಕಲರಿಗೆ ಬ್ಯಾಟರಿ ಚಾಲಿತ ವಾಹನ ನೀಡಿದರೆ ಆರ್ಥಿಕವಾಗಿಯೂ ಪರಿಸರ ಸಂರಕ್ಷಣೆಯ ದೃಷ್ಟಿಯಿಂದಲೂ ಅನುಕೂಲವಾಗುತ್ತದೆ. ಈ ವಾಹನಗಳಿಗೆ ಸರ್ಕಾರದಿಂದಲೇ ಉಚಿತವಾಗಿ ವಿಮೆ ಮಾಡಿಸಬೇಕು. ಈ ಬಗ್ಗೆ ತಾವು ಸರ್ಕಾರದ ಗಮನ ಸೆಳೆಯಬೇಕು ಎಂದು ಒತ್ತಾಯಿಸಲಾಗಿದೆ.

ADVERTISEMENT

ಸಂಘಟನೆಯ ಅಧ್ಯಕ್ಷ ಮಾಧವ ನಾಯಕ, ಪ್ರಮುಖರಾದ ಸುರೇಶ ನಾಯ್ಕ, ಖೈರುನ್ನೀಸಾ, ಸಿ.ಎನ್.ನಾಯ್ಕ, ಸೂರಜ್ ಕ್ರೂಮ್ಕರ್, ರಾಜೀವ ನಾಯ್ಕ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.