ADVERTISEMENT

‘ದಲಿತ ಸಮುದಾಯದ ಕಷ್ಟಗಳಿಗೆ ಸ್ಪಂದನೆ’

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2024, 15:57 IST
Last Updated 18 ಅಕ್ಟೋಬರ್ 2024, 15:57 IST
ಮುಂಡಗೋಡದಲ್ಲಿ ನಡೆದ ಸಭೆಯಲ್ಲಿ ಡಾ.ಬಾಬಾಸಾಹೇಬ್‌ ಅಂಬೇಡ್ಕರ್‌ ಸೇವಾ ಸಮಿತಿ ಎಸ್.ಸಿ, ಎಸ್‌.ಟಿ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಬಸವರಾಜ ವಾಲ್ಮೀಕಿ ಅವರಿಗೆ ರಾಜ್ಯ ಘಟಕದ ಅಧ್ಯಕ್ಷ ಯಲ್ಲಪ್ಪ ಹೊಸಮನಿ ಆಯ್ಕೆಪತ್ರ ನೀಡಿ ಗೌರವಿಸಿದರು
ಮುಂಡಗೋಡದಲ್ಲಿ ನಡೆದ ಸಭೆಯಲ್ಲಿ ಡಾ.ಬಾಬಾಸಾಹೇಬ್‌ ಅಂಬೇಡ್ಕರ್‌ ಸೇವಾ ಸಮಿತಿ ಎಸ್.ಸಿ, ಎಸ್‌.ಟಿ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಬಸವರಾಜ ವಾಲ್ಮೀಕಿ ಅವರಿಗೆ ರಾಜ್ಯ ಘಟಕದ ಅಧ್ಯಕ್ಷ ಯಲ್ಲಪ್ಪ ಹೊಸಮನಿ ಆಯ್ಕೆಪತ್ರ ನೀಡಿ ಗೌರವಿಸಿದರು   

ಮುಂಡಗೋಡ: ದಲಿತ ಸಮುದಾಯದ ಕಷ್ಟಗಳಿಗೆ ತಕ್ಷಣ ಸ್ಪಂದಿಸುವುದು ಹಾಗೂ ಅದಕ್ಕೆ ಕಾನೂನಾತ್ಮಕ ಪರಿಹಾರ ಒದಗಿಸುವುದು ಸಂಘಟನೆಯ ಮುಖ್ಯ ಉದ್ದೇಶವಾಗಿದೆ. ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತರನ್ನು ಒಳಗೊಂಡು ಬೇಡಿಕೆ ಈಡೇರಿಕೆಗೆ ಹೋರಾಟ ಮಾಡಲಾಗುವುದು ಎಂದು ಡಾ.ಬಾಬಾಸಾಹೇಬ್‌ ಅಂಬೇಡ್ಕರ್‌ ಸೇವಾ ಸಮಿತಿ ಎಸ್.ಸಿ, ಎಸ್‌.ಟಿ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಯಲ್ಲಪ್ಪ ಹೊಸಮನಿ ಹೇಳಿದರು.

ಇಲ್ಲಿನ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ನಡೆದ ಜಿಲ್ಲಾ ಘಟಕಕ್ಕೆ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶೋಷಣೆಗೊಳಪಟ್ಟಿರುವ ಮಹಿಳೆಯರ ಪರವಾಗಿ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು. ಅಲ್ಲದೇ ಜಿಲ್ಲೆಯ ಸಮಸ್ಯೆಯಾಗಿರುವ ಅರಣ್ಯ ಅತಿಕ್ರಮಣ ವಿಷಯ, ಅತಿಕ್ರಮಣದಾರರಿಗೆ ಸೂಕ್ತ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಸಂಘಟನೆಯಿಂದ ಹೋರಾಟ ಮಾಡಲಾಗುವುದು. ಇದಕ್ಕಾಗಿ ರೂಪುರೇಷೆ ಸಿದ್ಧಪಡಿಸಲಾಗುತ್ತಿದೆ. ಸಾಮಾಜಿಕ ಸೇವೆ ಮೂಲಕ ಸಂಘಟನೆಯು ಜನರಿಗೆ ಮತ್ತಷ್ಟು ಹತ್ತಿರವಾಗಲಿದೆ ಎಂದು ಹೇಳಿದರು.

ADVERTISEMENT

ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ವಾಲ್ಮೀಕಿ ಮಾತನಾಡಿ, ಸಂಘಟನೆಯು ಹೊಸ ಜವಾಬ್ದಾರಿ ನೀಡಿದ್ದು, ಅಂಬೇಡ್ಕರ್‌ ಅವರ ಮಾರ್ಗದರ್ಶನದಲ್ಲಿ ಸಂಘಟನೆಯನ್ನು ಮುನ್ನಡೆಸಲಾಗುವುದು. ಹೋರಾಟ, ಪ್ರತಿಭಟನೆ ಮಾಡಿದರೆ ಮಾತ್ರ ಬೇಡಿಕೆ ಈಡೇರುತ್ತವೆ ಎಂದಾದರೆ, ಸಂಘಟನೆಯು ಅದಕ್ಕೆ ತಕ್ಕಂತೆ ಹೋರಾಟ ನಡೆಸಲಿದೆ ಎಂದರು.

ಜಿಲ್ಲಾ ಘಟಕದ ಅಧ್ಯಕ್ಷರಾಗಿ ಹನುಮಾಪುರ ಗ್ರಾಮದ ಬಸವರಾಜ ವಾಲ್ಮೀಕಿ ಅವರನ್ನು ಸಂಘಟನೆಯಿಂದ ಗೌರವಿಸಲಾಯಿತು.

ಜಾವೇದ ಮುಕಾಶಿ, ಅಹ್ಮದ ರಫೀಕ ನಧಾಪ, ಈರಪ್ಪ ಉಸುರಿ, ತಿಮ್ಮಣ್ಣ ವಡ್ಡರ, ಪ್ರಕಾಶ ಖಾನಾಪುರ, ಅನಿಲ ತಳವಾರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.