ADVERTISEMENT

ಚುನಾವಣೆ ಸಮೀಕ್ಷೆ ಸುಳ್ಳಾಗಲಿದೆ: ಡಿ.ಕೆ ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2024, 14:17 IST
Last Updated 22 ನವೆಂಬರ್ 2024, 14:17 IST
ಡಿ.ಕೆ ಶಿವಕುಮಾರ್
ಡಿ.ಕೆ ಶಿವಕುಮಾರ್   

ಮುರುಡೇಶ್ವರ (ಉತ್ತರ ಕನ್ನಡ): ‘ಉಪಚುನಾವಣೆ ಕುರಿತ ಸಮೀಕ್ಷೆಗಳೆಲ್ಲ ಸುಳ್ಳಾಗಲಿದ್ದು, ಚನ್ನಪಟ್ಟಣ ಸೇರಿ ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.

‘ಚನ್ನಪಟ್ಟಣ ಕ್ಷೇತ್ರದಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕಡಿಮೆ ಮತ ಪಡೆದಿತ್ತು. ಉಪಚುನಾವಣೆಯಲ್ಲಿ ಅತಿ ಹೆಚ್ಚು ಮತ ಪಡೆಯುವ ವಿಶ್ವಾಸವಿದೆ’ ಎಂದು ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.

‘ಕುಮಾರಸ್ವಾಮಿ ಮತ್ತು ದೇವೆಗೌಡರ ಕುಟುಂಬದ ವಿರುದ್ಧ ಹೇಳಿಕೆ ನೀಡಿದ್ದಕ್ಕೆ ಸಚಿವ ಜಮೀರ್ ಅಹಮದ್ ಅವರಿಗೆ ಈಗಾಗಲೇ ಬುದ್ಧಿ ಹೇಳಿರುವೆ. ಜಮೀರ್ ಉತ್ತಮ ಕೆಲಸಗಾರ’ ಎಂದರು.

ADVERTISEMENT

‘ಮುರುಡೇಶ್ವರದ ನೇತ್ರಾಣಿ ದ್ವೀಪದ ಬಳಿ ಸ್ಕೂಬಾ ಡೈವಿಂಗ್ ಮಾಡಿ ಇಲ್ಲಿನ ಪ್ರಕೃತಿ ಸೌಂದರ್ಯ ಆಸ್ವಾದಿಸಿದೆ. ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಪುಲ ಅವಕಾಶ ಇರುವುದನ್ನು‌ ಖುದ್ದಾಗಿ ಅವಲೋಕಿಸಲು ಸ್ಕೂಬಾ ಡೈವಿಂಗ್ ಚಟುವಟಿಕೆ ಅವಕಾಶ ಒದಗಿಸಿತು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.