ದಾಂಡೇಲಿ: ನಗರದ ಮೂರು ಕಡೆ ವಿದ್ಯುತ್ ಕಂಬದ ಜಿ.ಒ.ಎಸ್ ಉಪಕರಣಗಳನ್ನು ಕಳವು ಮಾಡಲಾಗಿದೆ.
ನಗರದ ಐ.ಪಿ.ಎಂ,ಹಳೆದಾಂಡೇಲಿ ಮತ್ತು ಕೋಗಿಲಬನದಲ್ಲಿ ವಿದ್ಯುತ್ ಕಂಬಕ್ಕೆ ಅಳವಡಿಸಿರುವ ಜಿ.ಒ.ಎಸ್.ಉಪಕರಣಗಳು ಕಳ್ಳತನವಾಗಿವೆ. ಈ ಬಗ್ಗೆ ದಾಂಡೇಲಿ ನಗರ ಠಾಣೆಗೆ ದೂರು ನೀಡುವುದಾಗಿ ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ದೀಪಕ ನಾಯಕ ಶನಿವಾರ ತಿಳಿಸಿದ್ದಾರೆ.
ಇಂತಹ ಚಟುವಟಿಕೆಗಳು ನಡೆಯದಂತೆ ಕ್ಯಾಮೆರಾ ಅಳವಡಿಕೆಗೂ ಇಲಾಖೆ ಅಗತ್ಯ ಕ್ರಮಕೈಗೊಳ್ಳಲಿದೆ. ಸಾರ್ವಜನಿಕರು ಇಲಾಖೆ ಜತೆ ಸಹಕರಿಸಬೇಕು ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.