ADVERTISEMENT

ಹಲ್ಲೆ ಆರೋಪ: ಅಬಕಾರಿ ಇನ್‌ಸ್ಪೆಕ್ಟರ್, ಕಾನ್‍ಸ್ಟೆಬಲ್ ಅಮಾನತು

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2024, 16:16 IST
Last Updated 21 ಅಕ್ಟೋಬರ್ 2024, 16:16 IST
<div class="paragraphs"><p>ಅಮಾನತು</p></div>

ಅಮಾನತು

   

ಕಾರವಾರ: ತಾಲ್ಲೂಕಿನ ಮಾಜಾಳಿ ಚೆಕ್‍ಪೋಸ್ಟ್ ನಲ್ಲಿ ಮದ್ಯ ತಪಾಸಣೆ ನೆಪದಲ್ಲಿ ಅ.15ರಂದು ಬೆಂಗಳೂರಿನ ಲಾರಿ ಚಾಲಕರೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಅಬಕಾರಿ ಇನ್‌ಸ್ಪೆಕ್ಟರ್ ಸದಾಶಿವ ಕೋರ್ತಿ ಮತ್ತು ಕಾನ್‍ಸ್ಟೆಬಲ್ ಹೇಮಚಂದ್ರ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಅಬಕಾರಿ ಇಲಾಖೆ ಆಯುಕ್ತರು ಸೋಮವಾರ ಆದೇಶಿಸಿದ್ದಾರೆ.

‘ಲಾರಿ ಚಾಲಕನ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ಕರ್ತವ್ಯದ ವೇಳೆಯಲ್ಲಿ ಸಮವಸ್ತ್ರ ಧರಿಸದೆ ಇನ್‌ಸ್ಪೆಕ್ಟರ್ ಕಾರ್ಯನಿರ್ವಹಿಸಿದ್ದಾರೆ. ಇಬ್ಬರು ಸಿಬ್ಬಂದಿ ಗಂಭೀರ ಸ್ವರೂಪದ ಕರ್ತವ್ಯಲೋಪ ಎಸಗಿದ್ದ ಮೇಲ್ನೋಟಕ್ಕೆ ಕಂಡುಬರುತ್ತಿರುವುದರಿಂದ ಇಲಾಖೆ ವಿಚಾರಣೆ ಬಾಕಿ ಇರಿಸಿ ಅಮಾನತುಗೊಳಿಸಲಾಗಿದೆ’ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.