ADVERTISEMENT

ಕಾರವಾರ | ನದಿಗೆ ಬಿದ್ದ ಗ್ಯಾಸ್ ಟ್ಯಾಂಕರ್: ಜನರ ಸ್ಥಳಾಂತರಕ್ಕೆ ಸೂಚನೆ

​ಪ್ರಜಾವಾಣಿ ವಾರ್ತೆ
Published 16 ಜುಲೈ 2024, 7:29 IST
Last Updated 16 ಜುಲೈ 2024, 7:29 IST
   

ಕಾರವಾರ: ಅಂಕೋಲಾ ತಾಲ್ಲೂಕಿನ ಶಿರೂರು ಬಳಿ ಗುಡ್ಡ ಕುಸಿದು, ಗಂಗಾವಳಿ ನದಿಗೆ ಎರಡು ಗ್ಯಾಸ್ ಟ್ಯಾಂಕರ್ ಬಿದ್ದಿರುವ ಹಿನ್ನೆಲೆಯಲ್ಲಿ ನದಿ ಅಕ್ಕಪಕ್ಕದ ಗ್ರಾಮಗಳ ಜನರನ್ನು ಸ್ಥಳಾಂತರಿಸಲು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚಿಸಿದ್ದಾರೆ.

ಗ್ಯಾಸ್ ತುಂಬಿಕೊಂಡಿರುವ ಎರಡು ಟ್ಯಾಂಕರ್‌ಗಳು ನದಿಯಲ್ಲಿ ತೇಲುತ್ತಿವೆ. ಗ್ಯಾಸ್ ಸೋರಿಕೆಯಾಗುವ ಆತಂಕದ ಹಿನ್ನೆಲೆಯಲ್ಲಿ ನದಿ ತೀರದಲ್ಲಿರುವ ಗ್ರಾಮಗಳ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಕ್ರಮವಹಿಸಲು ಆದೇಶಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT