ಹಳಿಯಾಳ: ತಾಲ್ಲೂಕಿನಲ್ಲಿಯ ಹಲವಾರು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದ್ದು ಜನ ಹಾಗೂ ಜಾನುವಾರುಗಳಿಗೆ ನೀರಿನ ಸಮಸ್ಯೆ ಅಗುತ್ತಿದ್ದು ಕೂಡಲೇ ನೀರಿನ ಸಮಸ್ಯೆ ಪರಿಹರಿಸಬೇಕೆಂದು ಭಾಜಪ ಪಕ್ಷದ ಮುಖಂಡ ಮಾಜಿ ಶಾಸಕ ಸುನೀಲ ಹೆಗಡೆ ತಹಶೀಲ್ದಾರ ಡಾ.ಲೋಕೆಶ ರವರ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಇತ್ತೀಚಿಗೆ ಅತೀ ಹೆಚ್ಚು ಬಿಸಿಲಿನ ತಾಪಮಾನದಿಂದ ಜನ ಹಾಗೂ ಜಾನುವಾರುಗಳಿಗೆ ನೀರು ಇಲ್ಲದಂತಾಗಿದೆ. ತಾಲ್ಲೂಕಿನಲ್ಲಿ ರೈತಾಪಿ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿದ್ದು ಕುಡಿಯುವ ನೀರಿಗಾಗಿ ಅಲ್ಲಲ್ಲಿ ಅಲೆದಾಡುತ್ತಿರುವುದು ಕಂಡು ಬರುತ್ತಿದ್ದು ಕೂಡಲೇ ನೀರಿನ ಸಮಸ್ಯೆಯನ್ನು ಪರಿಹರಿಸಬೇಕು.
ಉತ್ತರ ಕನ್ನಡ ಜಿಲ್ಲೆ ಹಳಿಯಾಳ ತಾಲ್ಲೂಕಿನಲ್ಲಿ ಕೂಲಿ ಕಾರ್ಮಿಕರು, ರೈತರು ಹಾಗೂ ಮಧ್ಯಮ ವರ್ಗದ ಜನರು ವಾಸವಾಗಿದ್ದು ಈಗಾಗಲೇ ಅಸ್ತಿತ್ವಕ್ಕೆ ಬಂದಿರುವ ನೂತನ ಸರ್ಕಾರ ರಚನೆಯಾದ ತಕ್ಷಣ 200 ಯೂನಿಟ್ ವಿದ್ಯುತ್ ಉಚಿತವಾಗಿ ಪ್ರತಿ ಕುಟುಂಬಕ್ಕೆ ನೀಡುತ್ತೇವೆ ಅಂತಾ ಅವರ ಪ್ರಣಾಳಿಕೆಯಲ್ಲಿ ಹೇಳಿದ್ದು ಇರುತ್ತದೆ ,
ಸರ್ಕಾರ ರಚನೆಯಾಗಿ ಒಂದು ವಾರ ಕಳೆದರೂ ಸೂಕ್ತ ಮಾರ್ಗದರ್ಶನವಿಲ್ಲದೆ ಜನರಲ್ಲಿ ಗೊಂದಲ ಉಂಟಾಗಿದೆ ವಿದ್ಯುತ್ ಬಿಲ್ ಉಚಿತ ನೀಡುವ ಭರವಸೆ ನೀಡದ ಸರ್ಕಾರ ಕೂಡಲೇ ಇಲಾಖೆಗೆ ಸುತ್ತೋಲೆ ಹೊರಡಿಸಿ ಕ್ಷೇತ್ರದ ಪ್ರತಿ ಕುಟುಂಬಕ್ಕೆ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಬೇಕು ಯಾವುದೇ ಕಾರಣಕ್ಕೂ ಇದರಲ್ಲಿ ತಾರತಮ್ಯ ಮಾಡಬಾರದು ಒಂದಾನು ವೇಳೆ ತಾರತಮ್ಯ ಮಾಡಿದಲ್ಲಿ ಮುಂದಿನ ದಿನಗಳಲ್ಲಿ ಸರ್ಕಾರ ಹಾಗೂ ಸ್ಥಳೀಯ ಜನ ಪ್ರತಿನಿಧಿಗಳ ವಿರುದ್ದ ಉಗ್ರ ಹೋರಾಟ ಮಾಡಲಾಗುವುದು. ಎಂದು ಮನವಿಯಲ್ಲಿ ಎಚ್ಚರಿಸಿದ್ದಾರೆ.
ಮುಖಂಡರಾದ ಗಣಪತಿ ಕರಂಜೇಕರ, ಶಿವಾಜಿ ನರಸಾನಿ, ಚಂದ್ರಕಾಂತ ಕಮ್ಮಾರ, ವಿ ಎಮ್ ಪಾಟೀಲ, ರಾಜೇಶ್ವರಿ ಹಿರೇಮಠ, ಸಂಗೀತಾ ಜಾಧವ,ವಾಸು ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.