ಹೊನ್ನಾವರ: ಕಾರವಾರದಲ್ಲಿ ಈಚೆಗೆ ನಡೆದ ಜಿಲ್ಲಾ ಮಟ್ಟದ 14 ವರ್ಷದೊಳಗಿನ ಇಲಾಖಾ ಕ್ರೀಡಾಕೂಟದಲ್ಲಿ ನಡೆದ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಜಲವಳ್ಕರ್ಕಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಸಂಜೀವ ಗೊಂಡ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ.
ಇದೇ ಶಾಲೆಯ ಲೇಖಕ ನಾಯ್ಕ ಚಕ್ರ ಎಸೆತ ಹಾಗೂ ಗುಂಡು ಎಸೆತದಲ್ಲಿ ಕ್ರಮವಾಗಿ ದ್ವಿತೀಯ ಮತ್ತು ತೃತೀಯ ಸ್ಥಾನ, ಕಾರ್ತಿಕ ವೈದ್ಯ ಉದ್ದ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ದೈಹಿಕ ಶಿಕ್ಷಣ ಶಿಕ್ಷಕಿ ಸುಮಂಗಲಾ ಕ್ರೀಡಾಪಟುಗಳಿಗೆ ತರಬೇತಿ ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.