ಸಿದ್ದಾಪುರ: ತಾಲ್ಲೂಕಿನ ಬಿಳಗಿಯ ಸೇತುವೆ ಬಳಿ ಕುಮಟಾ-ಕೊಡಮಡಗಿ ರಾಜ್ಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಉಂಟಾಗಿ ರಸ್ತೆ ಸ್ಥಗಿತಗೊಂಡ ಘಟನೆ ಸೋಮವಾರ ಬೆಳಗಿನ ಜಾವ ನಡೆದಿದೆ.
ತಾಲ್ಲೂಕಿನಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿದ್ದು ಬಿಳಗಿಯ ಸೇತುವೆ ಬಳಿ ಗುಡ್ದ ಕುಸಿತ ಉಂಟಾಗಿ ರಾಜ್ಯ ಹೆದ್ದಾರಿ ಸುಮಾರ 4 ಗಂಟೆಗಳ ಕಾಲ ಸಂಪೂರ್ಣ ಸ್ಥಗಿತಗೊಂಡಿತ್ತು. ಇದರಿಂದ ಸಿದ್ದಾಪುರ-ಕುಮಟಾ ಮಾರ್ಗವಾಗಿ ತೆರಳುವ ಪ್ರಯಾಣಿಕರಿಗೆ ತೊಂದರೆ ಉಂಟಾಗಿತ್ತು.
ಈ ಮಾರ್ಗದಲ್ಲಿ ತೆರಳುವ ಪದವಿ ವಿದ್ಯಾರ್ಥಿಗಳು ಬಸ್ ಇಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ನಂತರ ಜೆಸಿಬಿ ಸಹಾಯದಿಂದ ಮಣ್ಣನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.