ಕಾರವಾರ: ತಾಲ್ಲೂಕಿನ ಕಿನ್ನರ ಗ್ರಾಮದ ನಿರಾಕಾರ ದೇವಾಲಯದ ಸಮೀಪ ಮಂಗಳವಾರ ನಸುಕಿನ ಜಾವ ಗುಡ್ಡ ಕುಸಿದು ಬಿದ್ದ ಪರಿಣಾಮ ಮನೆಯೊಂದು ನೆಲಸಮವಾಗಿದೆ. ಮನೆಯೊಳಗೆ ವ್ಯಕ್ತಿಯೊಬ್ಬರು ಸಿಲುಕಿರುವ ಶಂಕೆ ಇದ್ದು, ಅವರ ರಕ್ಷಣೆಗೆ ಸ್ಥಳೀಯರು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ತಿಕರ್ಸ್ ಗುರವ ಎಂಬುವವರಿಗೆ ಸೇರಿದ ಮನೆ ಇದಾಗಿದ್ದು, ಮನೆಯೊಳಗೆ ಅವರು ಸಿಲುಕಿರಬಹುದು ಎಂದು ಸ್ಥಳೀಯರು ಅಂದಾಜಿಸಿದ್ದಾರೆ. ಗುಡ್ಡ ಬಿದ್ದ ರಭಸಕ್ಕೆ ಮನೆಯ ಗೋಡೆ, ಚಾವಣಿ ಕುಸಿದು ಬಿದ್ದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.