ಕಾರವಾರ: ಅಂಕೋಲಾ ತಾಲ್ಲೂಕಿನ ಶಿರೂರು ಬಳಿ ಗಂಗಾವಳಿ ನದಿಗೆ ಹೊಂದಿಕೊಂಡಿರುವ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಗುಡ್ಡ ಕುಸಿತ ಸಂಭವಿಸಿದೆ. ಗುಡ್ಡ ಕುಸಿದ ರಭಸಕ್ಕೆ ರಸ್ತೆಯ ಪಕ್ಕದಲ್ಲಿ ನಿಂತಿದ್ದ ಟ್ಯಾಂಕರ್ ಗಂಗಾವಳಿ ನದಿಗೆ ಬಿದ್ದು ತೇಲಿಕೊಂಡು ಹೋಗಿದೆ.
ಗುಡ್ಡ ಕುಸಿತದ ಭೀಕರತೆಗೆ ಸಿಲುಕಿ ನದಿಯಂಚಿನಲ್ಲಿದ್ದ ಅಂಗಡಿಯಲ್ಲಿನ ಐದಕ್ಕೂ ಹೆಚ್ಚು ಜನ ಗಂಗಾವಳಿ ನದಿಯಲ್ಲಿ ಕೊಚ್ಚಿ ಹೋಗಿರುವ ಶಂಕೆಯೂ ವ್ಯಕ್ತವಾಗಿದೆ.
ಅಂಕೋಲಾ ಮತ್ತು ಕುಮಟಾ ನಡುವಿನ ರಸ್ತೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.