ADVERTISEMENT

ಹೊನ್ನಾವರ: ಬೆಂಗಳೂರು ಚಲೋ ನ.7ರಂದು

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2024, 14:02 IST
Last Updated 17 ಅಕ್ಟೋಬರ್ 2024, 14:02 IST
ಹೊನ್ನಾವರದಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಮಾತನಾಡಿದರು
ಹೊನ್ನಾವರದಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಮಾತನಾಡಿದರು   

ಹೊನ್ನಾವರ: ‘ಕಸ್ತೂರಿ ರಂಗನ್ ವರದಿ ತಿರಸ್ಕರಿಸಬೇಕು ಹಾಗೂ ಅರಣ್ಯ ಭೂಮಿ ಹಕ್ಕು ನೀಡುವಲ್ಲಿ ಉಂಟಾಗಿರುವ ತಾಂತ್ರಿಕ ಸಮಸ್ಯೆ ಬಗೆಹರಿಸಬೇಕೆಂಬ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನವೆಂಬರ್‌ 7ರಂದು ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗಿದೆ’ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದರು.

ಇಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ‘ಅಂದು ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರ ಗಮನ ಸೆಳೆಯಲಾಗುವುದು’ ಎಂದರು.

‘ಅರಣ್ಯವಾಸಿಗಳ ಭೂಮಿ ಹಕ್ಕಿನ ಹೋರಾಟ ನಿರ್ಣಾಯಕ ಹಂತ ತಲುಪಿದ್ದು, ಈ ನಿಟ್ಟಿನಲ್ಲಿ ಬೆಂಗಳೂರು ಚಲೋ ಮಹತ್ವದ ಹೆಜ್ಜೆಯಾಗಿದೆ. ಮಲೆನಾಡು ಹಾಗೂ ಕರಾವಳಿಗರ ಜೀವನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಕಸ್ತೂರಿ ರಂಗನ್ ವರದಿ ತಿರಸ್ಕರಿಸುವುದು ಅನಿವಾರ್ಯ’ ಎಂದು ಹೇಳಿದರು.

ADVERTISEMENT

ವೇದಿಕೆಯ ತಾಲ್ಲೂಕು ಘಟಕದ ಅಧ್ಯಕ್ಷ ಚಂದ್ರಕಾಂತ ಕೊಚರೇಕರ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸಂಚಾಲಕ ರಾಮ ಮರಾಠಿ, ವಾಮನ ನಾಯ್ಕ, ಸುರೇಶ ಮೇಸ್ತ, ಸುರೇಶ ನಾಯ್ಕ, ಆರ್.ಎಚ್. ನಾಯ್ಕ, ಸಚಿನ್ ನಾಯ್ಕ, ವಿನೋದ ನಾಯ್ಕ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.