ಹೊನ್ನಾವರ: ‘ಕಸ್ತೂರಿ ರಂಗನ್ ವರದಿ ಜಾರಿಯಾದರೆ ಕರಾವಳಿ ಹಾಗೂ ಮಲೆನಾಡಿನ ಸಹಜ ಜನಜೀವನಕ್ಕೆ ಧಕ್ಕೆಯಾಗಲಿದೆ’ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಅಭಿಪ್ರಾಯಪಟ್ಟರು.
ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ನಡೆಯಲಿರುವ ‘ಬೆಂಗಳೂರು ಚಲೋ’ ಪ್ರತಿಭಟನೆಯ ಹಿನ್ನೆಲೆಯಲ್ಲಿ ಗೇರುಸೊಪ್ಪದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ಪರಿಸರ ಸೂಕ್ಷ್ಮ ವಲಯ ಎಂದು ಘೋಷಣೆಯಾದಲ್ಲಿ ಕೃಷಿ ಹಾಗೂ ಇತರ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗಲಿದೆ. ಅರಣ್ಯವಾಸಿಗಳು ಅರಣ್ಯ ಭೂಮಿ ಹಕ್ಕಿನಿಂದ ವಂಚಿತರಾಗಲಿದ್ದಾರೆ’ ಎಂದು ಅವರು ಎಚ್ಚರಿಸಿದರು.
ವೇದಿಕೆಯ ಸಂಚಾಲಕ ಸುರೇಶ ನಾಯ್ಕ, ಮಹೇಶ ನಾಯ್ಕ ಕಾನಳ್ಳಿ, ಜಿಲ್ಲಾ ಸಂಚಾಲಕ ರಾಮ ಮರಾಠಿ, ಸಂಕೇತ ಯಲ್ಗೊಟ್ಗಿ, ಸುರೇಶ ತುಂಬೊಳ್ಳಿ, ವಿನೋದ ನಾಯ್ಕ, ಗುರುರಾಜ ನಾಯ್ಕ, ಸುಜಾತಾ ನಾಯ್ಕ, ಗೀತಾ ನಾಯ್ಕ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.