ADVERTISEMENT

ಉತ್ತರ ಕನ್ನಡದ ಪಕ್ಷೇತರ ಅಭ್ಯರ್ಥಿಯ ಪ್ರಣಾಳಿಕೆಯಲ್ಲೇನಿದೆ ಗೊತ್ತೇ?

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2019, 13:34 IST
Last Updated 16 ಏಪ್ರಿಲ್ 2019, 13:34 IST
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಚಿದಾನಂದ ಹರಿಜನ ಕಾರವಾರದಲ್ಲಿ ಬುಧವಾರ ಮತ ಯಾಚನೆ ಮಾಡಿದರು
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಚಿದಾನಂದ ಹರಿಜನ ಕಾರವಾರದಲ್ಲಿ ಬುಧವಾರ ಮತ ಯಾಚನೆ ಮಾಡಿದರು   

ಕಾರವಾರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿತ್ತಿರುವ ಚಿದಾನಂದ ಹರಿಜನ ತಮ್ಮ ಚುನಾವಣಾ ಪ್ರಣಾಳಿಕೆಯನ್ನು ಮಂಗಳವಾರ ಬಿಡುಗಡೆ ಮಾಡಿದರು.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅರಣ್ಯ ಅತಿಕ್ರಮಣಕಾರರಿಗೆ ಕಂದಾಯ ಇಲಾಖೆಯಿಂದ ಪಟ್ಟಾ ಸಿಗುವಂತೆ ಹೋರಾಟ ಮಾಡಲಾಗುವುದು. ಜಿಲ್ಲೆಯಾದ್ಯಂತ ನಿವೇಶನ ರಹಿತ ಬಡಕುಟುಂಬಗಳಿಗೆ ನಿವೇಶನ ಕೊಡಿಸಲಾಗುವುದು. ಅಡಿಕೆ ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸುವಂತೆ ಹೋರಾಟ ಮಾಡಲಾಗುವುದು’ ಎಂದು ಭರವಸೆ ನೀಡಿದರು.

‘ರೈತರ ಸಂಪೂರ್ಣ ಸಾಲಮನ್ನಾ ಮಾಡಲೂ ಸಂಸತ್ತಿನಲ್ಲಿ ಧ್ವನಿ ಎತ್ತಲಾಗುವುದು. ಮೀನುಗಾರರ ಸಮಸ್ಯೆಗೆ ಪರಿಹಾರ, ಅಡುಗೆ ಅನಿಲ ಸಿಲಿಂಡರ್‌ ದರರವನ್ನು ₹ 360ಕ್ಕೆ ನಿಗದಿ ಮಾಡುವುದು, ಯುವಕರಿಗೆ ಉದ್ಯೋಗಕ್ಕಾಗಿ ಕಾರ್ಖಾನೆಗಳ ಸ್ಥಾಪನೆ, ಕೃಷಿಕರಿಗೆ ಉಚಿತವಾಗಿ ನೇಗಿಲು ಸಿಗಲು ಪ್ರಯತ್ನಿಸುತ್ತೇನೆ. ಹುಬ್ಬಳ್ಳಿ– ಅಂಕೋಲಾ ರೈಲು ಯೋಜನೆ ಜಾರಿಗೂ ಶ್ರಮಿಸುತ್ತೇನೆ’ ಎಂದು ಹೇಳಿದರು.

ADVERTISEMENT

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಅನ್ನದಾತ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾ ಘಟಕದ ಕಾರ್ಯದರ್ಶಿ ದತ್ತಾತ್ರೇಯ ಅನಂತ ಭಟ್, ರಾಜ್ಯ ಸಂಘಟನಾ ಕಾರ್ಯದರ್ಶಿ ಗೋವಿಂದ ಮೆಳ್ಳಗಟ್ಟಿ, ಉಪಾಧ್ಯಕ್ಷ ಭೀಮಸಿ ವಾಲ್ಮೀಕಿ, ಪ್ರಧಾನ ಕಾರ್ಯದರ್ಶಿ ರಾಜು ಕುಂದರಗಿ ಹಾಗೂ ರಾಮಚಂದ್ರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.