ADVERTISEMENT

ಕಾರವಾರ: ಕಡಲತೀರ ಸ್ವಚ್ಛತಾ ದಿನಾಚರಣೆಗೆ ರಾಜ್ಯಪಾಲರಿಂದ ಚಾಲನೆ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2022, 2:50 IST
Last Updated 17 ಸೆಪ್ಟೆಂಬರ್ 2022, 2:50 IST
ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ಶನಿವಾರ ಸಾಂಕೇತಿಕವಾಗಿ ಚಾಲನೆ ನೀಡಿದರು.
ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ಶನಿವಾರ ಸಾಂಕೇತಿಕವಾಗಿ ಚಾಲನೆ ನೀಡಿದರು.    

ಕಾರವಾರ: ಅಂತರರಾಷ್ಟ್ರೀಯ ಕಡಲತೀರ ಸ್ವಚ್ಛತಾ ದಿನಾಚರಣೆಗೆ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಇಲ್ಲಿನ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ಶನಿವಾರ ಸಾಂಕೇತಿಕವಾಗಿ ಚಾಲನೆ ನೀಡಿದರು.

ಸಮುದ್ರ ಪೂಜೆ ನೆರವೇರಿಸಿ, ಕಸ ಹೆಕ್ಕಿದ ಬಳಿಕ ಸಸಿಯೊಂದನ್ನು ನೆಟ್ಟರು. ಸಂಘ ಸಂಸ್ಥೆಗಳಿಗೆ ವಿವಿಧ ಸ್ವಚ್ಛತಾ ಪರಿಕರಗಳನ್ನು ಇದೇವೇಳೆ ರಾಜ್ಯಪಾಲರು ಹಸ್ತಾಂತರಿಸಿದರು.

ದಿನಾಚರಣೆಯ ಅಂಗವಾಗಿ ಕಡಲತೀರದಲ್ಲಿ ಏಕಕಾಲಕ್ಕೆ 5 ಸಾವಿರ ಮಂದಿ ಸ್ವಚ್ಛತಾ ಕಾರ್ಯದಲ್ಲಿ ಕೈಜೋಡಿಸಿದ್ದಾರೆ. ವಿವಿಧ ಸಂಘ ಸಂಸ್ಥೆಗಳ ಸದಸ್ಯರು, ಶಾಲೆ ಕಾಲೇಜುಗಳ ವಿದ್ಯಾರ್ಥಿಗಳು, ಸಾರ್ವಜನಿಕರು, ನೌಕಾಪಡೆ ಸಿಬ್ಬಂದಿ ಭಾಗವಹಿಸಿದ್ದಾರೆ.

ADVERTISEMENT

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ದೇಶದ 75 ಕಡಲತೀರಗಳಲ್ಲಿ ಶನಿವಾರ ಸ್ವಚ್ಛತಾ ದಿನಾಚರಣೆ ಆಯೋಜಿಸಲಾಗಿದೆ. ಉತ್ತರ ಕನ್ನಡದ ಟ್ಯಾಗೋರ್ ಕಡಲತೀರ ಮತ್ತು ಮುರುಡೇಶ್ವರದಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯುತ್ತಿವೆ.

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕಿ ರೂಪಾಲಿ ನಾಯ್ಕ, ನೌಕಾಪಡೆಯ ಕರ್ನಾಟಕ ವಲಯದ ಫ್ಲ್ಯಾಗ್ ಆಫೀಸರ್ ಕಮಾಂಡಿಂಗ್ ರಿಯರ್ ಅಡ್ಮಿರಲ್ ಅತುಲ್ ಆನಂದ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ನಗರಸಭೆಯ ಜನಪ್ರತಿನಿಧಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.