ಕಾರವಾರ: 'ಹಿರಿಯ ಶಾಸಕರಾಗಿರುವ ಆರ್.ವಿ.ದೇಶಪಾಂಡೆ ಅವರಿಗೆ ಮುಖ್ಯಮಂತ್ರಿ ಆಗುವ ಅರ್ಹತೆ ಇದೆ' ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಮಂಕಾಳ ವೈದ್ಯ ಹೇಳಿದರು.
'ಸಿದ್ದರಾಮಯ್ಯ ಮತ್ತು ದೇಶಪಾಂಡೆ ಆಪ್ತರು. ಸ್ನೇಹದ ಅನ್ಯೋನ್ಯತೆಯಲ್ಲಿ ಸಿದ್ದರಾಮಯ್ಯ ಅವರು ದೇಶಪಾಂಡೆ ಅವರಿಗೆ ಮುಖ್ಯಮಂತ್ರಿ ಆಗುವಂತೆ ಹೇಳಿರಬಹುದು ಎಂಬುದು ನನ್ನ ಭಾವನೆ' ಎಂದು ಸೋಮವಾರ ನಗರದಲ್ಲಿ ಮಾಧ್ಯಮದವರಿಗೆ ತಿಳಿಸಿದರು.
'ಸಿದ್ದರಾಮಯ್ಯ ಅನುಮತಿ ನೀಡಿದರೆ ನಾನೂ ಸಿ.ಎಂ ಆಗುವೆ' ಎಂಬ ಆರ್.ವಿ.ದೇಶಪಾಂಡೆ ಹೇಳಿಕೆ ಕುರಿತು ಮಾಧ್ಯಮದವರ ಪ್ರಶ್ನೆಗೆ ಹೀಗೆ ಅವರು ಪ್ರತಿಕ್ರಿಯಿಸಿದರು.
'ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಸದ್ಯಕ್ಕಂತೂ ಇಲ್ಲ. ಹೈಕಮಾಂಡ್ ಮಟ್ಟದಲ್ಲೂ ಅಂತಹ ಚರ್ಚೆ ನಡೆದಿಲ್ಲ. ಒಂದು ವೇಳೆ ದೇಶಪಾಂಡೆ ಮುಖ್ಯಮಂತ್ರಿ ಆದರೆ ಸಂತೋಷ ಪಡುವ ಮೊದಲಿಗರಲ್ಲಿ ನಾನೂ ಒಬ್ಬ' ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.