ADVERTISEMENT

ಪ್ರವಾಹ ಪೀಡಿತ ಉತ್ತರ ಕನ್ನಡಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಮೊದಲ ಭೇಟಿ

​ಪ್ರಜಾವಾಣಿ ವಾರ್ತೆ
Published 29 ಜುಲೈ 2021, 9:38 IST
Last Updated 29 ಜುಲೈ 2021, 9:38 IST
ಪ್ರವಾಹ ಪೀಡಿತ ಉತ್ತರ ಕನ್ನಡ ಜಿಲ್ಲೆಗೆ ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಪ್ರವಾಹ ಪೀಡಿತ ಉತ್ತರ ಕನ್ನಡ ಜಿಲ್ಲೆಗೆ ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು.   

ಯಲ್ಲಾಪುರ: ಅತಿವೃಷ್ಟಿಯಿಂದ ಹಾನಿಯುಂಟಾದ ಸ್ಥಳಗಳ ಮಾಹಿತಿಯನ್ನು ಖುದ್ದಾಗಿ ಪರಿಶೀಲಿಸುತ್ತಿದ್ದು, ನಷ್ಟದ ಸಮಗ್ರ ಮಾಹಿತಿ ಕಲೆಹಾಕುತ್ತಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಪ್ರವಾಹ ಪೀಡಿತ ಜಿಲ್ಲೆಗೆ ಗುರುವಾರ ಆಗಮಿಸಿರುವ ಅವರು ಯಲ್ಲಾಪುರದಲ್ಲಿ ಮಾಧ್ಯಮದವರ ಜತೆ ಮಾತನಾಡಿದರು.

‘ನೆರೆ ಪರಿಹಾರಕ್ಕೆ ರಾಜ್ಯ ಸರ್ಕಾರದ ಬಳಿ ಅಗತ್ಯ ಹಣವಿದೆ. ಹಾನಿಯ ನಿಖರ ಮಾಹಿತಿ ಪಡೆದ ಬಳಿಕ ಕೇಂದ್ರಕ್ಕೆ ಹೆಚ್ಚಿನ ನೆರವು ಕೇಳುವ ಕುರಿತು ಚಿಂತಿಸುತ್ತೇವೆ’ ಎಂದರು.

ತಾಲ್ಲೂಕಿನ ತಳಕೆಬೈಲ್, ಅರಬೈಲ್ ಪ್ರದೇಶಕ್ಕೆ ಭೇಟಿ ನೀಡಿ ಭೂಕುಸಿತ ಉಂಟಾದ ಪ್ರದೇಶ ವೀಕ್ಷಿಸಿದರು. ಅದಕ್ಕೂ ಮುನ್ನ ಯಲ್ಲಾಪುರ ತಾಲ್ಲೂಕು ಆಸ್ಪತ್ರೆಯಲ್ಲಿ ಡಯಾಲಿಸಿಸ್ ಘಟಕ ಉದ್ಘಾಟಿಸಿದರು.

ಶಾಸಕ ಶಿವರಾಮ ಹೆಬ್ಬಾರ, ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ, ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ವಿ.ಎಸ್.ಪಾಟೀಲ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.