ಕಾರವಾರ: ‘ಯುವ ಪೀಳಿಗೆಯ ಭವಿಷ್ಯಕ್ಕೆ ಗತಕಾಲದ ಇತಿಹಾಸದ ಭದ್ರಬುನಾದಿಯ ಅಗತ್ಯವಿದೆ. ಹೀಗಾಗಿ ಇತಿಹಾಸದ ಸತ್ಯವನ್ನು ಅರಿಯುವತ್ತ ಗಮನ ಹರಿಸಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಹೇಳಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಕೆಂಪೇಗೌಡ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
‘ಐತಿಹಾಸಿಕ ಸಾಧನೆಗಳನ್ನು ಹಾಗೂ ಕೊಡುಗೆಗಳನ್ನು ಅರ್ಥ ಮಾಡಿಕೊಳ್ಳುವುದು ಮುಖ್ಯವಾಗಿದೆ. ಕೆಂಪೆಗೌಡರಂತಹ ಮಹನೀಯರ ಜೀವನಗಾಥೆ ಆದರ್ಶಪ್ರಾಯವಾಗಿದ್ದು ವಿದ್ಯಾರ್ಥಿಗಳು ಇವುಗಳ ಅಧ್ಯಯನಕ್ಕೆ ಹೆಚ್ಚು ಒತ್ತು ನೀಡಬೇಕಾಗಿದೆ’ ಎಂದರು.
ಶಿಕ್ಷಕ ಗಣೇಶ ಬಿಷ್ಟಣ್ಣವರ ಕೆಂಪೇಗೌಡರ ಕುರಿತು ವಿಶೇಷ ಉಪನ್ಯಾಸ ನೀಡಿದರು. ಉಪವಿಭಾಗಾಧಿಕಾರಿ ಜಯಲಕ್ಷ್ಮೀ ರಾಯಕೋಡ ಮಾತನಾಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಮಚಂದ್ರ ಕೆ.ಎಂ., ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.