ದಾಂಡೇಲಿ: ಕಾರ್ಮಿಕ ಮುಖಂಡ ಹಾಗೂ ಜನಪರ ಹೋರಾಟಗಾರ ಹರೀಶ್ ನಾಯ್ಕ (71) ಸೋಮವಾರ ಬೆಳಗ್ಗೆ ರಾಮನಗರದ ಸ್ವಗೃಹದಲ್ಲಿ ನಿಧನರಾದರು.
ಮೃತರಿಗೆ ಪತ್ನಿ, ಓರ್ವ ಪುತ್ರ ಇದ್ದಾರೆ.
ಮೃತರ ದೇಹವನ್ನು ಧಾರವಾಡ ಎಸ್. ಡಿ.ಎಮ್. ಆಸ್ಪತ್ರೆಗೆ ದಾನ ಮಾಡಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ದಾಂಡೇಲಿಯ ವೆಸ್ಟ್ ಕೋಸ್ಟ್ ಕಾಗದ ಕಂಪನಿಯಲ್ಲಿ ಉದ್ಯೋಗಿಯಾಗಿ ನಿವೃತ್ತಿಯಾಗಿದ್ದರು.
ಹಳಿಯಾಳ-ದಾಂಡೇಲಿ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ, ದಾಂಡೇಲಿ ನಗರಸಭೆಯ ಮಾಜಿ ಉಪಾಧ್ಯಕ್ಷರಾಗಿ ಕೆಲಸ ಮಾಡಿದ್ದರು. ಲೇಖಕರಾಗಿಯೂ ಗುರುತಿಸಿಕೊಂಡಿದ್ದರು.
ಉತ್ತಮ ವಾಗ್ಮಿ, ಕಾರ್ಮಿಕ ನಾಯಕರಾಗಿದ್ದ ಅವರು ಹಲವಾರು ಜನಪರ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದರು.
ಸಿ.ಐ.ಟಿ.ಯು ಸಂಘಟನೆ, ಸಿ.ಪಿ.ಐ.ಎಮ್ ಪಕ್ಷದಲ್ಲಿ ಸಕ್ರಿಯವಾಗಿದ್ದರು. ಮುನ್ಸಿಪಲ್ ಕಾರ್ಮಿಕರ ಸಂಘಟನೆಯ ರಾಜ್ಯಾಧ್ಯಕ್ಷರೂ ಆಗಿದ್ದರು.
ಸಿಐಟಿಯು, ಡಿವೈಎಫ್ಐ, ಜನವಾದಿ ಮಹಿಳಾ ಸಂಘಟನೆಯ ಪ್ರಮುಖರು ಸಂತಾಪ ಸೂಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.