ADVERTISEMENT

ಲೋಕಸಭೆ ಚುನಾವಣೆ | ಕಾಂಗ್ರೆಸ್ ಅಭ್ಯರ್ಥಿಯಾಗಲು ಆಸಕ್ತಿಯಿದೆ: ಅಂಜಲಿ ನಿಂಬಾಳ್ಕರ್

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2024, 13:51 IST
Last Updated 6 ಮಾರ್ಚ್ 2024, 13:51 IST
<div class="paragraphs"><p>ಅಂಜಲಿ ನಿಂಬಾಳ್ಕರ್</p></div>

ಅಂಜಲಿ ನಿಂಬಾಳ್ಕರ್

   

ಶಿರಸಿ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಲು ನನಗೆ ಆಸಕ್ತಿಯಿದ್ದು, ಪಕ್ಷದ ತೀರ್ಮಾನಕ್ಕೆ ಬದ್ಧನಿದ್ದೇನೆ ಎಂದು ಖಾನಾಪುರ ಕ್ಷೇತ್ರದ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ಹೇಳಿದರು. 

ನಗರದಲ್ಲಿ ಬುಧವಾರ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಟಿಕೆಟ್ ನೀಡಿ ಎಂದು ಅರ್ಜಿ ಹಾಕಿಲ್ಲ. ಕಾಂಗ್ರೆಸ್‍ನ ಮೊದಲ ಪಟ್ಟಿ ಒಂದು ವಾರದೊಳಗಡೆ ಬಿಡುಗಡೆಯಾಗಲಿದೆ. ಯಾರಿಗೆ ಟಿಕೆಟ್ ನೀಡಿದರೂ, ನಾವೆಲ್ಲರೂ ಒಗ್ಗಟ್ಟಾಗಿ ನಮ್ಮ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತೇವೆ. ಆದರೆ ನನಗೆ ಉತ್ತರ ಕನ್ನಡ ಲೋಕಸಭೆ ಕ್ಷೇತ್ರದ ಅಭ್ಯರ್ಥಿಯಾಗಲು ಆಸಕ್ತಿಯಿದೆ’ ಎಂದರು. 

ADVERTISEMENT

ಉತ್ತರ ಕನ್ನಡ ಲೋಕಸಭಾ ಕ್ಷೇತ್ರವು 8 ವಿಧಾನಸಭಾ ಕ್ಷೇತ್ರ ಒಳಗೊಂಡಿದೆ. ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಹಾಗೂ ಕಿತ್ತೂರ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರು ಆಯ್ಕೆಯಾಗಿದ್ದಾರೆ. ಎಲ್ಲರೂ ಸೇರಿ ಚುನಾವಣೆ ಎದುರಿಸುತ್ತೇವೆ ಎಂದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.