ADVERTISEMENT

ಜೊಯಿಡಾ: ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಸಾವು

​ಪ್ರಜಾವಾಣಿ ವಾರ್ತೆ
Published 15 ಜೂನ್ 2024, 19:21 IST
Last Updated 15 ಜೂನ್ 2024, 19:21 IST
   

ಜೊಯಿಡಾ (ಉತ್ತರ ಕನ್ನಡ ಜಿಲ್ಲೆ): ತಾಲ್ಲೂಕಿನ ರಾಮನಗರ ಪೊಲೀಸ್ ಠಾಣೆ ಎದುರು ಮೈಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಭಾಸ್ಕರ ಬೋಂಡೆಲ್ಕರ (28) ಬೆಳಗಾವಿಯ ಆಸ್ಪತ್ರೆಯಲ್ಲಿ ಶನಿವಾರ ಮೃತಪಟ್ಟಿದ್ದಾನೆ.

‘ಮಾವನ ವಿರುದ್ಧದ ಪ್ರಕರಣದ ಕುರಿತು ವಿಚಾರಿಸಲು ಬಂದಿದ್ದ ಭಾಸ್ಕರ ಗಲಾಟೆ ಮಾಡಿ, ಆತ್ಮಹತ್ಯೆಗೆ ಯತ್ನಿಸಿದ್ದ’ ಎಂದು ಪೊಲೀಸರು ತಿಳಿಸಿದ್ದಾರೆ.

‘ಭಾಸ್ಕರ ಆತ್ಮಹತ್ಯೆಗೆ ಪೊಲೀಸರ ಪ್ರಚೋದನೆಯೇ ಕಾರಣ. ತಪ್ಪಿತಸ್ಥ ಪೊಲೀಸರ ವಿರುದ್ಧ ಪ್ರಕರಣ ದಾಖಲಿಸಬೇಕು’ ಎಂದು ಆಗ್ರಹಿಸಿ ಕುಣಬಿ ಸಮುದಾಯದ ಜನರು ರಾಮನಗರ ಠಾಣೆ ಎದುರು ಪ್ರತಿಭಟನೆ ನಡೆಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.