ಕಾರವಾರ: ‘ಮೀನುಗಾರರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಮುದಾಯದ ಮುಖಂಡರ, ಜನಪ್ರತಿನಿಧಿಗಳ ಸಭೆಯನ್ನು ಶೀಘ್ರವೇ ಆಯೋಜಿಸಲಾಗುವುದು. ನಗರದ ವಾಣಿಜ್ಯ ಬಂದರಿನ ಅಭಿವೃದ್ಧಿ ಕುರಿತುಮೀನುಗಾರರಿಗೆ ಇರುವ ಭಿನ್ನಾಭಿಪ್ರಾಯವನ್ನೂ ಅಲ್ಲೇ ಮಾತುಕತೆ ಮೂಲಕ ಬಗೆಹರಿಸಬಹುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಹೇಳಿದರು.
ನಗರದಜಿಲ್ಲಾ ಸಹಕಾರ ಮೀನು ಮಾರಾಟ ಒಕ್ಕೂಟದ ಕಚೇರಿಯ ಸಮೀಪ ನಿರ್ಮಿಸಲಾಗಿರುವ ನೂತನ ಸಮುದಾಯ ಭವನವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.
ಸಾಂಪ್ರದಾಯಿಕ ಮೀನುಗಾರರ ಸಮಸ್ಯೆಗಳು,ಕರಾವಳಿ ನಿಯಂತ್ರಣ ವಲಯದ ವಿಚಾರ ಸೇರಿದಂತೆ ಮೀನುಗಾರರು ಎದುರಿಸುತ್ತಿರುವ ಎಲ್ಲಸಮಸ್ಯೆಗಳು, ಗೊಂದಲಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಅವುಗಳಿಗ ಪರಿಹಾರ ಕಂಡುಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು’ ಎಂದು ಅವರು ಭರವಸೆ ನೀಡಿದರು.
ಮೀನುಗಾರಿಕೆಯನ್ನು ಅಭಿವೃದ್ಧಿ ಮಾಡಲುಕೇಂದ್ರ ಸರ್ಕಾರವು ದೊಡ್ಡ ಪ್ರಮಾಣದಲ್ಲಿಹಣ ಮಂಜೂರು ಮಾಡುತ್ತಿದೆ. ನಮ್ಮ ಜಿಲ್ಲೆಯು ಅದರ ಹೆಚ್ಚಿನ ಪ್ರಯೋಜನ ಪಡೆದುಕೊಳ್ಳಬೇಕು. ಈ ಕುರಿತು ಎಲ್ಲರೂ ಒಟ್ಟಾಗಿವಿಚಾರ ವಿನಿಮಯ ಮಾಡಿಕೊಂಡು, ವಿವಾದಗಳನ್ನುನ್ಯಾಯಾಲಯದ ಹೊರಗೆಪರಿಹರಿಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.
ಶಾಸಕಿ ರೂಪಾಲಿ ನಾಯ್ಕ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ರಾಜ್ಯದಲ್ಲಿ ಬಿ.ಜೆ.ಪಿ ಸರ್ಕಾರವು ಮೀನುಗಾರ ಸಮುದಾಯದ ಆಮೂಲಾಗ್ರ ಅಭಿವೃದ್ಧಿಗೆ ಹತ್ತಾರು ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳ ಪ್ರಯೋಜನ ಪಡೆದುಕೊಳ್ಳಬೇಕು’ ಎಂದು ತಿಳಿಸಿದರು.
ಮೀನು ಮಾರಾಟ ಒಕ್ಕೂಟದ ಅಧ್ಯಕ್ಷ ಗಣಪತಿ ಮಾಂಗ್ರೆ ಪ್ರಾಸ್ತಾವಿಕವಾಗಿ ಮಾತನಾಡಿ, ‘ಮೀನುಗಾರರ ಎಲ್ಲ ರೀತಿಯ ಸಾಲಗಳನ್ನು ಮನ್ನಾ ಮಾಡಬೇಕು. ರೈತರಿಗೆ ಸಿಗುವ ಎಲ್ಲ ಸೌಲಭ್ಯಗಳನ್ನು ಒದಗಿಸಬೇಕು’ ಎಂದು ಆಗ್ರಹಿಸಿದರು.
₹60 ಲಕ್ಷ ವೆಚ್ಚ:ಹೊಸ ಸಮುದಾಯ ಭವನಕ್ಕೆ ₹ 60 ಲಕ್ಷ ವಿನಿಯೋಗಿಸಲಾಗಿದೆ.ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ₹25 ಲಕ್ಷ,ಒಕ್ಕೂಟದಿಂದ ₹25 ಲಕ್ಷ ಹಾಗೂ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂಪಾಲಿ ನಾಯ್ಕ ₹ 10ಲಕ್ಷ ಮಂಜೂರು ಮಾಡಿದ್ದರು.
ಮೀನುಗಾರರ ಮುಖಂಡರಾದ ಗಣಪತಿ ಉಳ್ವೇಕರ್, ವಾಮನ ಹರಿಕಂತ್ರ, ರಮಾಕಾಂತ ಗಾಂವಕರ್, ಸುರೇಶ ತಾಂಡೇಲ, ಮೋಹನ ಬೋಳಶೆಟ್ಟಿಕರ್, ರೇಷ್ಮಾ ಮಾಳ್ಸೇಕರ್ ಕಾರ್ಯಕ್ರಮದಲ್ಲಿ ಇದ್ದರು. ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ಪಿ.ನಾಗರಾಜ ಸ್ವಾಗತಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.